Saturday, June 28, 2025
spot_imgspot_img
spot_imgspot_img

ಕಾಸರಗೋಡು: ನೀರು ತುಂಬಿದ್ದ ಬಕೆಟ್‌ನೊಳಗೆ ಬಿದ್ದು 1 ವರ್ಷದ ಮಗು ಸಾವು..!

- Advertisement -
- Advertisement -

ಕಾಸರಗೋಡು: ನೀರು ತುಂಬಿದ್ದ ಬಕೆಟ್‌ನೊಳಗೆ ಬಿದ್ದು ಒಂದು ವರ್ಷದ ಮಗು ಮೃತಪಟ್ಟ ಘಟನೆ ಮಂಜೇಶ್ವರ ಸಮೀಪದ ಕಡಂಬಾರ್‌ನಲ್ಲಿ ನಡೆದಿದೆ.

ಮೃತಪಟ್ಟ ಮಗುವನ್ನು ಕಡಂಬಾರ್ ನ ಕೆ. ಎ ಹಾರಿಸ್ ಹಾಗೂ ಖೈರುನ್ನಿಸಾ ದಂಪತಿ ಪುತ್ರಿ ಫಾತಿಮಾ ಎಂದು ಗುರುತಿಸಲಾಗಿದೆ.

ಮನೆಯೊಳಗೆ ಆಟವಾಡುತ್ತಿದ್ದ ಮಗು ಶೌಚಾಲಯದಲ್ಲಿ ನೀರು ತುಂಬಿದ್ದ ಬಕೆಟ್‌ಗೆ ಬಿದ್ದಿರುವುದು ಕಂಡುಬಂದಿದೆ. ಮನೆಯವರು ಗಮನಿಸಿ ಕೂಡಲೇ ಮಗುವನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆಗಲೇ ಮೃತಪಟ್ಟಿತ್ತು. ಘಟನೆ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!