Monday, June 8, 2026
spot_imgspot_img
spot_imgspot_img

ಕಾಸರಗೋಡು: ಪಿಸ್ತಾ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು..!

- Advertisement -
- Advertisement -

ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಮೃತಪಟ್ಟ ಘಟನೆ ಕುಂಬಳೆಯಲ್ಲಿ ನಡೆದಿದೆ.

ಮೃತಪಟ್ಟ ಮಗುವನ್ನು ಕುಂಬಳೆ ಭಾಸ್ಕರ ನಗರದ ಅನ್ವರ್ ಮೆಹರೂಫಾ ದಂಪತಿ ಪುತ್ರ ಅನಾಸ್ ಎಂದು ಗುರುತಿಸಲಾಗಿದೆ.

ಪಿಸ್ತಾವನ್ನು ತಿನ್ನುತ್ತಿದ್ದಾಗ ಸಿಪ್ಪೆ ಗಂಟಲಲ್ಲಿ ಸಿಲುಕಿದ್ದು ಮನೆಯವರು ಸಿಪ್ಪೆಯ ಒಂದು ತುಂಡನ್ನು ಹೊರ ತೆಗೆದಿದ್ದಾರೆ. ಬಳಿಕ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ವೈದ್ಯರು ತಪಾಸಣೆ ನಡೆಸಿದಾಗ ಗಂಟಲಲ್ಲಿ ಯಾವುದೇ ವಸ್ತುಗಳು ಸಿಲುಕಿಲ್ಲ ಎಂದು ತಿಳಿಸಿದ್ದರಿಂದ ಮನೆಗೆ ಕರೆದುಕೊಂಡು ಬರಲಾಯಿತು. ಆದಿತ್ಯವಾರ ಬೆಳಿಗ್ಗೆ ಬಾಲಕನಿಗೆ ಉಸಿರಾಟದ ತೊಂದರೆ ಉಂಟಾಗಿದ್ದು, ಆಸ್ಪತ್ರೆಗೆ ಕೊಂಡೊಯ್ದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!