Friday, March 21, 2025
spot_imgspot_img
spot_imgspot_img

ಕಾಸರಗೋಡು: ರೈಲಿಗೆ ಕಲ್ಲೆಸೆದ ಪ್ರಕರಣ; ಇಬ್ಬರು ಆರೋಪಿಗಳ ಬಂಧನ..!

- Advertisement -
- Advertisement -

ಕಾಸರಗೋಡು: ರೈಲಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಕಾಸರಗೋಡು ಮವ್ವಾರ್‌‌ನ ಸುಂದರ (49) ಮತ್ತು ಮುರ್ಷಿದಾಬಾದ್‌ನ ರೋಶನ್ ರಾಯ್ (19) ಎಂದು ಗುರುತಿಸಲಾಗಿದೆ.

ಇಬ್ಬರು ಬೇಕಲ ಬೀಚ್‌ನ ಕಾರ್ಮಿಕರಾಗಿದ್ದಾರೆ. ಮಂಗಳವಾರ ಮಧ್ಯಾಹ್ನ 2.45 ರ ಸುಮಾರಿಗೆ ಮಂಗಳೂರು ಚೆನ್ನೈ ಎಕ್ಸ್ ಪ್ರೆಸ್ ರೈಲಿಗೆ ಬೇಕಲ ಸಮೀಪ ಕಲ್ಲೆಸೆದಿದ್ದು, ಪ್ರಯಾಣಿಕರು ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದರು. ಪೊಲೀಸರು ನಡೆಸಿದ ತನಿಖೆಯಿಂದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ರೊಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!