Sunday, June 14, 2026
spot_imgspot_img
spot_imgspot_img

ಕಾಸರಗೋಡು: ಮರ ಕಡಿಯುತ್ತಿದ್ದ ವೇಳೆ ಮರ ಬಿದ್ದು ವ್ಯಕ್ತಿ ಸಾವು..!

- Advertisement -
- Advertisement -

ಕಾಸರಗೋಡು: ಮರ ಕಡಿಯುತ್ತಿದ್ದ ಸಂದರ್ಭದಲ್ಲಿ ಮರ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಾಸರಗೋಡಿನ ಮಂಜೇಶ್ವರ ಸಮೀಪದ ಕಡಂಬಾರ್ ಇಡಿಯ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಕಡಂಬಾರ್ ಗಾಂಧಿ ನಗರದ ಅಬ್ದುಲ್ ಸತ್ತಾರ್ (44) ಎಂದು ಗುರುತಿಸಲಾಗಿದೆ.

ಗಂಭೀರ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಸಾಗಿಸಿದರೂ ಜೀವ ಉಳಿಸಲಾಗಲಿಲ್ಲ. ಇಡಿಯದ ಖಾಸಗಿ ವ್ಯಕ್ತಿಯೋರ್ವರ ಹಿತ್ತಿಲಿನಲ್ಲಿ ಮರ ಕಡಿಯುತ್ತಿದ್ದಾಗ ಘಟನೆ ನಡೆದಿದೆ. ಮೃತದೇಹವನ್ನು ಮಂಗಲ್ಪಾಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

- Advertisement -

Related news

error: Content is protected !!