Saturday, June 28, 2025
spot_imgspot_img
spot_imgspot_img

ಕಾಸರಗೋಡು: ನದಿಗೆ ಹಾರಿ ಯುವಕ ಆತ್ಮಹತ್ಯೆ..!

- Advertisement -
- Advertisement -

ಕಾಸರಗೋಡು: ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ತಳಂಗರೆ ತೆರುವತ್‌ನ ಸೈಯದ್ ಝಕರಿಯಾ (21) ಎಂದು ಗುರುತಿಸಲಾಗಿದೆ.

ಮಂಗಳವಾರ ರಾತ್ರಿ ಚಂದ್ರ ಗಿರಿ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ಯುವಕ ನದಿಗೆ ಹಾರಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಶೋಧ ನಡೆಸಿದ್ದಾರೆ. ಬುಧವಾರ ಬೆಳಿಗ್ಗೆ ಚೆಮ್ನಾಡ್ ಸಮೀಪ ನದಿ ತೀರದಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆ ಗೆ ಕೊಂಡೊಯ್ಯಲಾಗಿದ್ದು, ಝಕಾರಿಯ ನಗರದಲ್ಲಿ ಹಣ್ಣು ಹಂಪಲು ಮಾರಾಟ ಮಾಡುತ್ತಿದ್ದರು ಎಂದು ಸಂಬಂಧಿಕರ ತಿಳಿಸಿದ್ದಾರೆ. ನಗರ ಠಾಣಾ ಪೊಲೀಸರು ಅಸಹಜ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!