Saturday, August 15, 2026
spot_imgspot_img
spot_imgspot_img

ಕಾಸರಗೋಡು: ಬೈಕ್- ಕಾರು ನಡುವೆ ಅಪಘಾತ; ಯುವಕ ಸಾವು..!

- Advertisement -
- Advertisement -

ಕಾಸರಗೋಡು: ಬೈಕ್ ಮತ್ತು ಕಾರು ನಡುವೆ ಉಂಟಾದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಚೆರ್ಕಳ ಕೆ .ಕೆ ಪುರದಲ್ಲಿ ನಡೆದಿದೆ.

ಮೃತಪಟ್ಟ ಯುವಕ ಕುಂಬಳೆ ಮೊಗ್ರಾಲ್ ಖುತುಬಿ ನಗರದ ಅಹಮ್ಮದ್ ಕಬೀರ್ (30) ಎಂದು ಗುರುತಿಸಲಾಗಿದೆ.

ಇವರು ಸಂಬಂಧಿಕರೊಬ್ಬರ ವಿವಾಹ ಆಮಂತ್ರಣಕ್ಕೆ ತೆರಳಿ ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡ ಕಬೀರ್‌ನನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!