- Advertisement -
- Advertisement -
ಕಾಸರಗೋಡು: ಕಾರು ಮತ್ತು ಆಟೋ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ಓರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಸಮೀಪ ನಡೆದಿದೆ.
ಮೃತಪಟ್ಟ ಆಟೋ ಚಾಲಕ ಕಾಞಾಂಗಾಡ್ ಮೋಹನ್ ಎಂದು ಗುರುತಿಸಲಾಗಿದೆ.
ಮೋಹನ್ ಚಲಾಯಿಸುತ್ತಿದ್ದ ಆಟೋ ರಿಕ್ಷಾ ಮತ್ತು ಕಾರು ನಡುವೆ ಅಪಘಾತ ನಡೆದಿದೆ. ಕಾರು ಮತ್ತು ಆಟೋ ರಿಕ್ಷಾ ನಜ್ಜುಗುಜ್ಜಾಗಿದೆ. ಕಾರಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ನಜ್ಜುಗುಜ್ಜಾದ ಆಟೋ ರಿಕ್ಷಾದೊಳಗೆ ಸಿಲುಕಿದ್ದ ಚಾಲಕನನ್ನು ಪೊಲೀಸರು ಹಾಗೂ ನಾಗರಿಕರು ಹೊರತೆಗೆದು ಆಸ್ಪತ್ರೆಗೆ ತಲಪಿದರೂ ಜೀವ ಉಳಿಸಲಾಗಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ
- Advertisement -








