Sunday, June 29, 2025
spot_imgspot_img
spot_imgspot_img

ಕಾಸರಗೋಡು: ಲಾರಿ -ಸ್ಕೂಟರ್ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಮೃತ್ಯು..!

- Advertisement -
- Advertisement -

ಕಾಸರಗೋಡು: ಲಾರಿ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ತೂಮಿನಾಡು ಎಂಬಲ್ಲಿ ನಡೆದಿದೆ.

ಮೃತಪಟ್ಟ ಯುವಕನನ್ನು ಉಪ್ಪಳ ಐಲ ನಿವಾಸಿ ಕಲ್ಪೇಶ್‌‌ ಯು.(35) ಎಂದು ಗುರುತಿಸಲಾಗಿದೆ.

ಕಲ್ಪೇಶ್‌ ಉಪ್ಪಳದಿಂದ ಕೆ.ಸಿ ರೋಡ್‌‌ನ ಪೇಪರ್ ಮಿಲ್‌ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಲ್ಲೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಮಂಗಲ್ಪಾಡಿ ಸರಕಾರಿ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!