- Advertisement -
- Advertisement -



ಕಾಸರಗೋಡು: ಸ್ಕೂಟರ್ ಹಾಗೂ ವ್ಯಾನ್ ನಡುವೆ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಉಪ್ಪಳ ಸಮೀಪದ ಬಾಯಾರು ಎಂಬಲ್ಲಿ ನಡೆದಿದೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೈವಳಿಕೆ ಕಳಾಯಿಯ ಮುಹಮ್ಮದ್ ಸಾದಿಕ್ ಮತ್ತು ಮುಹಮ್ಮದ್ ಮೊಯ್ದೀನ್ ಗಾಯಗೊಂಡವರು. ಪೈವಳಿಕೆ ಖಾಸಗಿ ಶಾಲೆಯ ವಿದ್ಯಾರ್ಥಿಗಳಾಗಿದ್ದರು. ಬೆಳಿಗ್ಗೆ 7.45 ರ ಸುಮಾರಿಗೆ ಬಾಯಾರು ಪೆಟ್ರೋಲ್ ಬಂಕ್ ಬಳಿಯ ರಸ್ತೆಯಲ್ಲಿ ಅಪಘಾತ ನಡೆದಿದೆ.
ಈ ಬಗ್ಗೆ ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -








