Monday, May 6, 2024
spot_imgspot_img
spot_imgspot_img

ಕಾಸರಗೋಡು: ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪ; ಮದ್ರಸ ಶಿಕ್ಷಕನ ಬಂಧನ

- Advertisement -G L Acharya panikkar
- Advertisement -
vtv vitla

ಕಾಸರಗೋಡು : ಐವರು ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಮದ್ರಸ ಶಿಕ್ಷಕನನ್ನು ಬಂಧಿಸಲಾಗಿದೆ. ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಇಳಂತಿಲ ಹೌಸ್ ನಿವಾಸಿ ಅಬ್ದುಲ್ ಹಮೀದ್ (55) ಆರೋಪಿಯಾಗಿದ್ದಾನೆ.

ಮದ್ರಸ ಶಿಕ್ಷಕನಾಗಿದ್ದ ಅಬ್ದುಲ್ ಹಮೀದ್ ಆರು, ಏಳು ಮತ್ತು ಒಂಬತ್ತನೇ ತರಗತಿಯಲ್ಲಿ ಓದುತ್ತಿರುವ ಐವರು ಬಾಲಕಿಯರಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಆರೋಪಿಸಲಾಗಿತ್ತು. ಆದೂರು ಪೊಲೀಸರು ಈತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಕಿರುಕುಳಕ್ಕೊಳಗಾದ ವಿದ್ಯಾರ್ಥಿನಿಯರ ಪೈಕಿ ಓರ್ವ ಆ ವಿಷಯವನ್ನು ಮನೆಯವರಿಗೆ ತಿಳಿಸಿದ್ದಳು. ಅದರಂತೆ ಮನೆಯವರು ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ಇದೇ ರೀತಿಯ ದೂರನ್ನು ಇತರ ನಾಲ್ವರು ವಿದ್ಯಾರ್ಥಿನಿಯರ ಮನೆಯವರೂ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಪೊಲೀಸರು ಆ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!