- Advertisement -
- Advertisement -



ಕಾಸರಗೋಡು: ನಿಲ್ಲಿಸಿದ್ದ ಬಸ್ಸಿನ ಹಿಂಭಾಗಕ್ಕೆ ಬೈಕ್ ಢಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಪೊಯಿನಾಚಿ ಸಮೀಪದ ಬಟ್ಟತ್ತೂರು ಎಂಬಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಯನ್ನು ಕುನಿಯ ನಿವಾಸಿ ಕೆ.ವಿ.ಅಬ್ದುಲ್ ರಹ್ಮಾನ್ (19) ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಯ ಬಟ್ಟತ್ತೂರಿನಲ್ಲಿ ಮಂಗಳವಾರ ಸಂಜೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ರಹ್ಮಾನ್‌ರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಗುರುವಾರು ಮುಂಜಾನೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಬೇಕಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








