Saturday, June 28, 2025
spot_imgspot_img
spot_imgspot_img

ಕಾಸರಗೋಡು: ಗಾಂಜಾ ಸಾಗಾಟ; ಆರೋಪಿಗಳಿಬ್ಬರ ಬಂಧನ

- Advertisement -
- Advertisement -
vtv vitla

ಕಾಸರಗೋಡು: ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳಿಬ್ಬರನ್ನು ಅಬಕಾರಿ ದಳದ ಸಿಬ್ಬಂದಿಗಳು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ಬಂಧಿತರನ್ನು ಸೀತಾಂಗೋಳಿ ನಿವಾಸಿಗಳಾದ ಹನೀಫ್ ಬಿ (40) ಮತ್ತು ಫೈಝಲ್ (38) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿಯನುಸಾರ ಕಾಸರಗೋಡು ಅಬಕಾರಿ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಒಂದು ಕಿಲೋ ಗಾಂಜಾ ಸಹಿತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಫೈಝಲ್ ಮಾದಕ ವಸ್ತು ಸಾಗಾಟ ಸೇರಿದಂತೆ ಎಂಟಕ್ಕೂ ಅಧಿಕ ಪ್ರಕರಣಗಳ ಆರೋಪಿಯಾಗಿದ್ದಾನೆ. ಹನೀಫ್ ವಿರುದ್ಧವೂ ಗಾಂಜಾ ಸಾಗಾಟ ಪ್ರಕರಣಗಳಿರುವುದಾಗಿ ಅಬಕಾರಿ ದಳದ ಸಿಬ್ಬಂದಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!