Monday, June 22, 2026
spot_imgspot_img
spot_imgspot_img

ಕಾಸರಗೋಡು: ಕಾರು-ಲಾರಿ ನಡುವೆ ಅಪಘಾತ; ಒಂದೇ ಕುಟುಂಬದ ಐವರು ಮೃತ್ಯು..!

- Advertisement -
- Advertisement -

ಕಾಸರಗೋಡು: ಕಾರು ಮತ್ತು ಲಾರಿ ನಡುವೆ ಉಂಟಾದ ಭೀಕರ ಅಪಘಾತದಲ್ಲಿ ಕಾಸರಗೋಡು ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಕಣ್ಣೂರು ಜಿಲ್ಲೆಯ ಕಣ್ಣಾಪುರದಲ್ಲಿ ನಡೆದಿದೆ.

ಮೃತಪಟ್ಟವರನ್ನು ಕಾಸರಗೋಡು ನಿವಾಸಿಗಳಾದ ಕಾಳೀಚನಡುಕ್ಕಂನ ಸಾಸ್ತಂಪಾರದ ಕೆ.ಎನ್.ಪದ್ಮಕುಮಾರ್ (59), ಭೀಮನಡಿ ಚೂರಿಕ್ಕಾಡ್ ನಿವಾಸಿ ಸುಧಾಕರನ್(52), ಸುಧಾಕರನ್ ಅವರ ಪತ್ನಿ ಅಜಿತಾ (35), ಅವರ ತಂದೆ ಕೊಜುಮ್ಮಲ್ ಕೃಷ್ಣನ್ (65) ಮತ್ತು ಅಜಿತಾ ಅವರ ಸಹೋದರ ಅಜಿತ್ ಅವರ ಪುತ್ರ ಆಕಾಶ್ (9) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಕಾರಲ್ಲಿದ್ದ ಮೂವರು ಪುರುಷರು, ಓರ್ವ ಮಹಿಳೆ ಹಾಗೂ 10 ವರ್ಷದ ಬಾಲಕ ಮೃತಪಟ್ಟಿದ್ದಾರೆ. ಮೃತಪಟ್ಟವರು ಚಿತ್ತಾರಿಕಲ್ ಭೀಮನಡಿ ನಿವಾಸಿಗಳು ಎಂದು ತಿಳಿದು ಬಂದಿದೆ. ಮೃತದೇಹಗಳನ್ನು ಕಣ್ಣೂರು ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ.

ಕಣ್ಣೂರು ಕಡೆಯಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕಾರು ಮತ್ತು ಕಣ್ಣೂರು ಕಡೆಗೆ ತೆರಳುತ್ತಿದ್ದ ಅಡುಗೆ ಅನಿಲ ಸಿಲಿಂಡ‌ರ್ ಸಾಗಾಟದ ಲಾರಿ ನಡುವೆ ಅಪಘಾತ ನಡೆದಿದೆ. ಕೋಝಿಕ್ಕೋ ಡ್ ನಿಂದ ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನೊಳಗೆ ಸಿಲುಕಿದ್ದ ಪ್ರಯಾಣಿಕರನ್ನು ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಪೊಲೀಸರು ಹೊರ ತೆಗೆದರು ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!