Saturday, June 28, 2025
spot_imgspot_img
spot_imgspot_img

ಕಾಸರಗೋಡು: ಕಾರಿನಲ್ಲಿ ಗಾಂಜಾ ಸಾಗಾಟ; 30ಕಿಲೋ ಗಾಂಜಾ ಸಹಿತ ಓರ್ವ ಅರೆಸ್ಟ್..!

- Advertisement -
- Advertisement -

ಕಾಸರಗೋಡು: ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು 30 ಕಿಲೋ ಗಾಂಜಾ ಸಹಿತ ಓರ್ವ ನನ್ನು ಬೇಕಲ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೋವಿಕ್ಕಾನ ಪೊವ್ವಲ್ ನ ಬಾಸಿತ್ (35) ಎಂದು ಗುರುತಿಸಲಾಗಿದೆ.

ಬುಧವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿಯ ಕುನಿಯ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಪೆರಿಯ ಕಡೆಯಿಂದ ಬಂದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಗಾಂಜಾ ಪತ್ತೆಯಾಗಿದೆ. ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದು, ಓರ್ವನನ್ನು ಬಂಧಿಸಲಾಯಿತು.

ಗಾಂಜಾವನ್ನು ಪ್ಲಾಸ್ಟಿಕ್ ಕವರ್ ಗಳಲ್ಲಿ ತುಂಬಿಸಿ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!