- Advertisement -
- Advertisement -



ಕಾಸರಗೋಡು: ಪುತ್ರನ ಸಾವಿನ ದುಃಖವನ್ನು ತಾಳಲಾರದೆ ದಂಪತಿಗಳು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಮೇಲ್ಪರಂಬ ಠಾಣಾ ವ್ಯಾಪ್ತಿಯ ಪೊಯಿನಾಚಿಯಲ್ಲಿ ನಡೆದಿದೆ.
ಪೊಯಿನಾಚಿ ಪರಂಬದ ವೇಣುಗೋಪಾಲನ್ ನಾಯರ್(55) ಮತ್ತು ಅವರ ಪತ್ನಿ ಸ್ಮಿತಾ(45) ಮೃತಪಟ್ಟವರು.
ಇವರ ಏಕೈಕ ಪುತ್ರ ಎಂ. ಶಿವಾನಂದನ್(19) ಮಂಗಳೂರಿನ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಕಳೆದ ಡಿ.29ರಂದು ಬೇಕಲ್ ಉತ್ಸವದ ವೇಳೆ ರೈಲು ಡಿಕ್ಕಿ ಹೊಡೆದು ಮೃತಪಟ್ಟಿದ್ದರು. ಮಗನ ಸಾವಿನ ಬಳಿಕ ದಂಪತಿಗಳು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಶುಕ್ರವಾರ ಬೆಳಿಗ್ಗೆ 9 ಗಂಟೆಯಾದರೂ ಮನೆಯ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ನೆರೆಮನೆಯವರು ಅನುಮಾನಗೊಂಡು ಪರಿಶೀಲಿಸಿದಾಗ, ಕೋಣೆಯೊಳಗೆ ಇಬ್ಬರೂ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಮೇಲ್ಪರಂಬ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -








