- Advertisement -
- Advertisement -
ಕಾಸರಗೋಡು: ನಾಪತ್ತೆಯಾಗಿದ್ದ ವಿದ್ಯಾರ್ಥಿನಿಯೋರ್ವಳ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಬೇಡಡ್ಕದಲ್ಲಿ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿನಿ ಬೇಡಡ್ಕದ ಅಶ್ವತಿ (17) ಎಂದು ಗುರುತಿಸಲಾಗಿದೆ.
ಮನೆ ಸಮೀಪದ ಬಾವಿಯಲ್ಲಿ ಗುರುವಾರ ಸಂಜೆ ಮೃತದೇಹ ಪತ್ತೆಯಾಗಿದೆ. ಈಕೆ ಕುಂಡಂಗುಳಿ ಸರಕಾರಿ ಹಯರ್ ಸೆಕಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿಯಾಗಿದ್ದಳು. ಗುರುವಾರ ಬೆಳಿಗ್ಗೆ ಶಾಲೆಗೆ ತೆರಳಿದ್ದ ಈಕೆ ನಾಪತ್ತೆಯಾಗಿದ್ದಳು . ಸಂಜೆಯಾದರೂ ಮನೆಗೆ ಬಾರದೆ ಇದ್ದುದರಿಂದ ಮನೆಯವರು ಬೇಡಡ್ಕ ಠಾಣಾ ಪೊಲೀಸರಿಗೆ ದೂರು ನೀಡಿದ್ದರು.
ಬಳಿಕ ಮನೆಯವರು ಶೋಧ ನಡೆಸಿದಾಗ ಮನೆ ಸಮೀಪದ ಜನವಾಸ ಇಲ್ಲದ ಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಅಗ್ನಿಶಾಮಕ ದಳದ ಸಿಬಂದಿಗಳು ಮೃತದೇಹವನ್ನು ಮೇಲಕ್ಕೆತ್ತಿದರು. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತದೇಹ ಕಾಸರಗೋಡು ಜನರಲ್ ಆಸ್ಪತ್ರೆ ಶವಗಾರದಲ್ಲಿ ಇರಿಸಲಾಗಿದ್ದು , ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟುಕೊಡಲಿದೆ.
- Advertisement -