Saturday, June 6, 2026
spot_imgspot_img
spot_imgspot_img

ಕಾಸರಗೋಡು: ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಾಟ; ಆರೋಪಿಯ ಬಂಧನ

- Advertisement -
- Advertisement -

ಕಾಸರಗೋಡು: ಆಟೋರಿಕ್ಷಾದಲ್ಲಿ ಸಾಗಿಸುತಿದ್ದ 18.240 ಗ್ರಾಂ. ಎ ಡಿ. ಎಂ. ಎ ಮಾದಕ ವಸ್ತು ಸಹಿತ ಓರ್ವನನ್ನು ಕುಂಬಳೆ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕೊಡಿಯಮ್ಮೆ ಪೂಕಟ್ಟೆ ನಿವಾಸಿ ಎಂ ಅಬ್ದುಲ್ ಅಜೀಜ್ (42) ಎಂದು ಗುರುತಿಸಲಾಗಿದೆ.

ಸಾಗಾಟಕ್ಕೆ ಬಳಸಿದ ಆಟೋ ರಿಕ್ಷಾ ವಶಕ್ಕೆ ಪಡೆಯಲಾಗಿದೆ. ಮಂಗಳವಾರ ರಾತ್ರಿ ಕೊಡಿಯಮ್ಮೆಯಲ್ಲಿ ವಾಹನ ತಡೆದು ತಪಾಸಣೆ ನಡೆಸಿ ವಿಚಾರಣೆ ನಡೆಸುವಾಗ ಮಾದಕ ವಸ್ತು ಸಾಗಾಟ ಪತ್ತೆಯಗಿದೆ.

ಪೊಲೀಸರನ್ನು ಕಂಡಾಗ ಆರೋಪಿ ರಿಕ್ಷಾ ಬಿಟ್ಟು ಪರಾರಿಯಾಗಲು ಯತ್ನಿಸಿದ್ದನು. ಇದರಿಂದ ಸಂಶಯಗೊಂಡ ಪೊಲೀಸರು ಆರೋಪಿಯನ್ನು ಬೆನ್ನಟ್ಟಿ ಹಿಡಿದು ವಿಚಾರಣೆ ನಡೆಸಿದಾಗ ಮಾದಕ ವಸ್ತು ಪತ್ತೆಯಾಗಿದೆ.

- Advertisement -

Related news

error: Content is protected !!