- Advertisement -
- Advertisement -



ಕಾಸರಗೋಡು: ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಎಂಬಲ್ಲಿ 18 ವರ್ಷದ ಮಗಳನ್ನು ತಂದೆಯೇ ಕಡಿದು ಕೊಲೆಗೈದಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಕೌಟುಂಬಿಕ ಕಲಹ ಕೃತ್ಯಕ್ಕೆ ಕಾರಣ ಎಂದು ತಿಳಿದುಬಂದಿದೆ.
ತೂಮಿನಾಡಿನ ಜುಮೈಲಾ ಕೊಲೆಗೀಡಾದ ಯುವತಿ. ಕೃತ್ಯ ನಡೆಸಿದ ಆರೋಪದಲ್ಲಿ ತಂದೆ ಉಮ್ಮರ್ ಫಾರೂಕ್ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಿರುಚಾಟದ ಶಬ್ದ ಕೇಳಿ ಪರಿಸರ ವಾಸಿಗಳು ಸ್ಥಳಕ್ಕೆ ಬಂದಾಗ ಜುಮೈಲಾ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದ್ದು, ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಜೀವ ಉಳಿಸಲಾಗಲಿಲ್ಲ, ಕೃತ್ಯ ನಡೆಯುವ ಸಮಯದಲ್ಲಿ ತಾಯಿ ಕೂಡಾ ಮನೆಯಲ್ಲಿದ್ದರು ಎಂದು ತಿಳಿದುಬಂದಿದೆ.
ವಿದೇಶದಲ್ಲಿದ್ದ ಉಮ್ಮರ್ ಫಾರೂಕ್ ಮೂರು ತಿಂಗಳ ಹಿಂದೆ ಊರಿಗೆ ಬಂದಿದ್ದರು. ಆಸ್ತಿಗಾಗಿ ಕುಟುಂಬದಲ್ಲಿ ಜಗಳ ನಡೆಯುತ್ತಿತ್ತು ಎಂದು ಸ್ಥಳೀಯರ ಮೂಲಕ ತಿಳಿದುಬಂದಿದೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -








