Tuesday, June 9, 2026
spot_imgspot_img
spot_imgspot_img

ಕಾಸರಗೋಡು: ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ..!

- Advertisement -
- Advertisement -

ಕಾಸರಗೋಡು: ಕಾವಲುಗಾರರೋರ್ವರನ್ನು ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಉಪ್ಪಳ ಪೇಟೆಯಲ್ಲಿ ನಡೆದಿದೆ.

ಮತಪಟ್ಟ ವ್ಯಕ್ತಿಯನ್ನು ಪಯ್ಯನ್ನೂರು ನಿವಾಸಿ ಸುರೇಶ್ (45) ಎಂದು ಗುರುತಿಸಲಾಗಿದೆ.

ಉಪ್ಪಳ ಪೇಟೆಯಲ್ಲಿ ರಾತ್ರಿ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಸುರೇಶ್‌ರನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ತಡರಾತ್ರಿ ಮೃತಪಟ್ಟರು.

ಉಪ್ಪಳ ನಿವಾಸಿ ಸವಾದ್ ಈ ಕೃತ್ಯ ನಡೆಸಿರುವುದಾಗಿ ಪೊಲೀಸರಿಗೆ ಮಾಹಿತಿ ಲಭಿಸಿದೆ. ಸುರೇಶ್ ಉಪ್ಪಳ ದ ಫ್ಲ್ಯಾಟ್ ವೊಂದರ ಕಾವಲುಗಾರ ರಾಗಿ ಕೆಲಸ ನಿರ್ವಹಿಸುತ್ತಿದ್ದರು. ಸುರೇಶ್ ಮತ್ತು ಸವಾದ್ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಕೊಲೆಯಲ್ಲಿ ಕೊನೆಗೊಂಡಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ. ಮಂಜೇಶ್ವರ ಠಾಣಾ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.

- Advertisement -

Related news

error: Content is protected !!