Saturday, June 6, 2026
spot_imgspot_img
spot_imgspot_img

ಕಾಸರಗೋಡು: ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು..!

- Advertisement -
- Advertisement -

ಕಾಸರಗೋಡು: ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ವಾಮಂಜೂರು ಕಜೆ ನಿವಾಸಿ ಮುಹಮ್ಮದ್ ಸಾದಿಕ್(40) ಎಂದು ಗುರುತಿಸಲಾಗಿದೆ.

ಸೋಮವಾರ ರಾತ್ರಿ ಮಂಜೇಶ್ವರ ಹೊಸಬೆಟ್ಟು ಎಂಬಲ್ಲಿ ಈ ಅಪಘಾತ ನಡೆದಿದೆ. ಗಂಭೀರ ಗಾಯಗೊಂಡಿದ್ದ ಸಾದಿಕ್ ರನ್ನು ಮಂಗಳೂರಿನ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!