Thursday, July 23, 2026
spot_imgspot_img
spot_imgspot_img

ಕಾಸರಗೋಡು: ಪೋಕ್ಸೋ ಪ್ರಕರಣ; ಪೊಲೀಸ್ ಕಸ್ಟಡಿಯಿಂದ ಪರಾರಿಯಾದ ಆರೋಪಿಯ ಬಂಧನ

- Advertisement -
- Advertisement -

ಕಾಸರಗೋಡು: ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಪರಾರಿಯಾದ ಘಟನೆ ಬುಧವಾರ ಕಾಸರಗೋಡಿನಲ್ಲಿ ನಡೆದಿದ್ದು, ಕೆಲ ತಾಸುಗಳ ಬಳಿಕ ಈತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನೆಕ್ರಾಜೆ ಕೊರೆಕ್ಕಾನದ ಅಶ್ವಥ್ (19) ಪರಾರಿಯಾಗಿದ್ದ ಆರೋಪಿ. ಪರಾರಿಯಾದ ಬಳಿಕ ನಗರದ ಅನೆಬಾಗಿಲು ಎಂಬಲ್ಲಿನ ಪೊದೆಯೊಂದರಲ್ಲಿ ಅವಿತುಕೊಂಡಿದ್ದ ಈತನನ್ನು ಪೊಲೀಸರು ಬಂಧಿಸಿದ್ದಾರೆ.

ಪೋಕ್ಸೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ವಿಚಾರಣೆಗೆ ಕಾಸರಗೋಡು ನ್ಯಾಯಾಲಯವು ಆರೋಪಿಯನ್ನು ಬುಧವಾರ ಮಧ್ಯಾಹ್ನ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು. ಪೊಲೀಸರು ಕಾಸರಗೋಡು ನಗರ ಠಾಣೆಗೆ ಕರೆದುಕೊಂಡು ಬಂದ ಸಂದರ್ಭದಲ್ಲಿ ಪೊಲೀಸರ ಕಣ್ಣಪ್ಪಿಸಿ ಪರಾರಿಯಾಗಿದ್ದನು. ಕೂಡಲೇ ಹುಡುಕಾಟ ಪ್ರಾರಂಭಿಸಿದ ಪೊಲೀಸರು, ಆನೆಬಾಗಿಲು ಎಂಬಲ್ಲಿ ಪೊದೆಯಲ್ಲಿ ಅವಿತುಕೊಂಡಿದ್ದ ಈತನನ್ನು ಸಂಜೆ ವೇಳೆ ಬಂಧಿಸಿದರು.

- Advertisement -

Related news

error: Content is protected !!