Friday, March 29, 2024
spot_imgspot_img
spot_imgspot_img

ಕಾಸರಗೋಡು ಜಿಲ್ಲಾಧಿಕಾರಿ ನಿವಾಸದ ಬಳಿ ಶ್ರೀಗಂಧದ ಕೊರಡುಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನ

- Advertisement -G L Acharya panikkar
- Advertisement -

ಕಾಸರಗೋಡು: ಕಾಸರಗೋಡು ಜಿಲ್ಲಾಧಿಕಾರಿ ನಿವಾಸದ ಬಳಿ ಶ್ರೀಗಂಧದ ಕೊರಡುಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಗಂಧದ ಮಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಅಧಿಕೃತ ನಿವಾಸದ ಸಮೀಪದಿಂದ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ. ಸುಮಾರು ಒಂದು ಕ್ವಿಂಟಾಲ್ ಶ್ರೀಗಂಧ ಪತ್ತೆಯಾಗಿದ್ದು ಇದರ ಮೌಲ್ಯ ಸುಮಾರು 2.5 ಕೋಟಿ ರೂ. ಎಂದು ಅಂದಾಜಿಸಲಾಗಿದೆ.

ಇಂದು ಮುಂಜಾನೆ 4.30ರ ಸುಮಾರಿಗೆ ಜಿಲ್ಲಾಧಿಕಾರಿಯ ಮನೆಯಲ್ಲಿ ಕಾರು ಚಾಲಕ ಹಾಗೂ ಗನ್ ಮ್ಯಾನ್ ಎಚ್ಚೆತ್ತಾಗ ಮನೆ ಸಮೀಪ ಭಾರೀ ಶಬ್ದ ಕೇಳಿ ಬಂದಿತ್ತು. ಗನ್ ಮ್ಯಾನ್ ಮತ್ತು ಚಾಲಕ ಹೊರ ಬಂದು ನೋಡಿದಾಗ ಸಮೀಪದ ಮನೆಯಂಗಳದಲ್ಲಿ ಲಾರಿಗೆ ಶ್ರೀಗಂಧದ ಕೊರಡುಗಳನ್ನು ತುಂಬಿಸುತ್ತಿರುವುದು ಗಮನಕ್ಕೆ ಬಂದಿದೆ. ಬಳಿಕ ಜಿಲ್ಲಾಧಿಕಾರಿಯವರಿಗೆ ಮಾಹಿತಿ ನೀಡಿದ್ದು, ಕೂಡಲೇ ಸ್ಥಳಕ್ಕೆ ತೆರಳಿದ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು, ಪೊಲೀಸರ ನೆರವಿನೊಂದಿಗೆ ಅಕ್ರಮವನ್ನು ಬೆಳಕಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಮನೆ ಮಾಲಕ ಹಾಗೂ ಆರೋಪಿಗಳು ದಾಳಿ ಸಂದರ್ಭ ಪರಾರಿಯಾಗಿದ್ದಾರೆ. ಶ್ರೀಗಂಧವನ್ನು ಅರಣ್ಯ ಇಲಾಖೆಗೆ ಹಸ್ತಾ೦ತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!