- Advertisement -
- Advertisement -




ಕಾಸರಗೋಡು: ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ ನೀಡಲು ಯತ್ನಿಸಿದ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಉದ್ಯಾವರ ಜಮಾಲುದ್ದೀನ್ ಫೈಝಲ್ ( 39) ಮತ್ತು ಹೊಸಬೆಟ್ಟು ವಿನ ರಾಫಿಲ್ (45) ಎಂದು ಗುರುತಿಸಲಾಗಿದೆ.
ಮಂಜೇಶ್ವರ ಗೋವಿಂದ ಪೈ ಕಾಲೇಜು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಾರಿನಲ್ಲಿ ಬಂದ ಇವರು ಮೊಬೈಲ್ ನಂಬ್ರ ಗಳನ್ನು ನೀಡುವಂತೆ ಕಿರುಕುಳ ನೀಡಲು ಯತ್ನಿಸಿದ್ದರು ಎನ್ನಲಾಗಿದೆ. ಬಳಿಕ ವಿದ್ಯಾರ್ಥನಿಯರು ತಪ್ಪಿಸಿ ಮನೆಗೆ ತಲಪಿದ್ದರು. ಈ ಬಗ್ಗೆ ವಿದ್ಯಾರ್ಥಿನಿಯರು ಮಂಜೇಶ್ವರ ಠಾಣಗೆ ನೀಡಿದ ದೂರಿನಂತೆ ಇಬ್ಬರನ್ನು ಬಂಧಿಸಲಾಗಿದೆ.
- Advertisement -








