Tuesday, June 16, 2026
spot_imgspot_img
spot_imgspot_img

ಕಾಸರಗೋಡು: ಕಾರು ಮತ್ತು ಅಂಬ್ಯುಲೆನ್ಸ್ ನಡುವೆ ಭೀಕರ ಅಪಘಾತ: ಕಾರಿನಲ್ಲಿದ್ದ ಮೂವರು ಯುವಕರು ದಾರುಣ ಸಾವು..!

- Advertisement -
- Advertisement -

ಕಾಸರಗೋಡು:ಕಾರು ಮತ್ತು ಅಂಬ್ಯುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನಲ್ಲಿದ್ದ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ನಡೆದಿದೆ.

ಅಪಘಾತದಲ್ಲಿ ತೃಶ್ಯೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಮೃತಪಟ್ಟವರೆಂದು ಗುರುತಿಸಲಾಗಿದೆ. ಘಟನೆಯಲ್ಲಿ ಅಂಬ್ಯುಲೆನ್ಸ್‌ ನಲ್ಲಿದ್ದ ರೋಗಿಯೂ ಗಾಯಗೊಂಡಿದ್ದು, ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿದ್ದ ಇನ್ನೋರ್ವನನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು ಈ ವೇಳೆ ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕಾರು ಸಂಪೂರ್ಣ ಜಖಂಗೊಂಡಿದೆ.

- Advertisement -

Related news

error: Content is protected !!