- Advertisement -
- Advertisement -




ಕಾಸರಗೋಡು: ಗ್ಯಾರೇಜ್ ಮಾಲಕನೋರ್ವನ ಮೃತದೇಹ ರಸ್ತೆ ಬದಿಯ ಚರಂಡಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡು ಬಂದಡ್ಕದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಬಂದಡ್ಕ ಪೆಟ್ರೋಲ್ ಸಮೀಪದ ರತೀಶ್ ( 42) ಎಂದು ಗುರುತಿಸಲಾಗಿದೆ.
ಆಂಬ್ಯುಲೆನ್ಸ್ ಚಾಲಕರಾಗಿ ದುಡಿಯುತ್ತಿದ್ದ ರತೀಶ್ ಗುರುವಾರ ರಾತ್ರಿ 9.30 ರ ಸುಮಾರಿಗೆ ಸ್ಕೂಟರ್ ನಲ್ಲಿ ಮನೆಯಿಂದ ತೆರಳಿದ್ದರು. ಶುಕ್ರವಾರ ಬೆಳಿಗ್ಗೆ ಗ್ಯಾರೇಜ್ ಸಮೀಪದ ರಸ್ತೆಯ ಚರಂಡಿಯಲ್ಲಿ ಮೃತ ದೇಹ ಪತ್ತೆಯಾಗಿದೆ.ಸ್ಕೂಟರ್ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆ ಕೊಂಡೊಯ್ಯಲಾಗಿದೆ. ಈ ಬಗ್ಗೆ ಬೇಡಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
- Advertisement -