- Advertisement -
- Advertisement -






ಕಾಸರಗೋಡು: ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಬದಿಯಡ್ಕ ಸಮೀಪದ ಕನ್ಯಾಪಾಡಿಯ ಯುವಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಮೃತಪಟ್ಟ ಯುವಕನನ್ನು ಕನ್ಯಾಪಾಡಿಯ ಉನೈಸ್ (19) ಎಂದು ಗುರುತಿಸಲಾಗಿದೆ.
ಬೆಂಗಳೂರು ವೈಟ್ ಫೀಲ್ಡ್ ನ ಕಟ್ಟಡದಿಂದ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಯುವಕನು ಈ ಕಟ್ಟಡದ ಮಾಲಕನ ವಸ್ತ್ರಲಾಯದ ನೌಕರನಾಗಿದ್ದನು. ಯುವಕ ಕಟ್ಟಡದ ನಾಲ್ಕನೇ ಅಂತಸ್ತಿನಲ್ಲಿ ವಾಸಿಸುತ್ತಿದ್ದನು. ಮೃತದೇಹವನ್ನು ಊರಿಗೆ ತಂದು ಅಂತ್ಯಕ್ರಿಯೆ ನಡೆಸಲಾಯಿತು ಎಂದು ತಿಳಿದುಬಂದಿದೆ.
- Advertisement -