Monday, June 15, 2026
spot_imgspot_img
spot_imgspot_img

ಕಾಸರಗೋಡು: ನೇಣು ಬಿಗಿದು ಯುವತಿ ಆತ್ಮಹತ್ಯೆಗೆ ಯತ್ನ; ರಕ್ಷಿಸಿ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಮೃತ್ಯು

- Advertisement -
- Advertisement -

ಕಾಸರಗೋಡು: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ವೈದ್ಯಕೀಯ ವಿದ್ಯಾರ್ಥಿನಿ ಮನೆಯವರಿಂದ ರಕ್ಷಿಸಲ್ಪಟ್ಟು ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಬೇತೂರು ಪಾರ ಸಮೀಪ ನಡೆದಿದೆ.

ಮೃತಪಟ್ಟ ವಿದ್ಯಾರ್ಥಿನಿಯನ್ನು ಬೇಡಡ್ಕ ಬೇತೂರುಪಾರ ತಚ್ಚಾರ್ ಕುಂಡುವಿನ ಬಾಬು ಎಂಬವರ ಪುತ್ರಿ ಮಹಿಮಾ (19) ಎಂದು ಗುರುತಿಸಲಾಗಿದೆ.

ಇವರು ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿಯಾಗಿದ್ದರು. ಬುಧವಾರ ಬೆಳಗ್ಗೆ ಮಹಿಮಾ ಮನೆಯ ಬೆಡ್ ರೂಮ್ ನಲ್ಲಿ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಗಮನಿಸಿದ ಆಕೆಯ ಸಹೋದರ ಮಹೇಶ್ ಆಕೆಯನ್ನು ತಕ್ಷಣ ನೇಣು ಹಗ್ಗದಿಂದ ಕೆಳಕ್ಕಿಳಿಸಿ ಕಾರಿನಲ್ಲಿ ಆಸ್ಪತ್ರೆಗೆ ಕಾಸರಗೋಡಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಮನೆಯಿಂದ ಒಂದು ಕಿ.ಮೀ.ನಷ್ಟು ದೂರ ಸಾಗಿದಾಗ ಬೇತೂರು ಪಾರ ಸಮೀಪ ಕಾರು ಅಪಘಾತಕ್ಕೀಡಾಗಿದೆ. ಇದರಿಂದ ಗಾಯಗೊಂಡಿದ್ದ ಮಹಿಮಾ, ಮಹೇಶ್ ಮತ್ತು ಅವರ ತಾಯಿ ವನಜಾರನ್ನು ಸ್ಥಳೀಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಅಷ್ಟರಲ್ಲಿ ಮಹಿಮಾ ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.

ಮಹೇಶ್ ಮತ್ತು ವನಜಾ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಅಪಘಾತದಿಂದ ಅಥವಾ ನೇಣು ಬಿಗಿದು ಮಹಿಮಾ ಮೃತಪಟ್ಟಿರಬಹುದೇ ಎಂಬುದು ಮರಣೋತ್ತರ ಪರೀಕ್ಷಾ ವರದಿ ಲಭಿಸಿದ ಬಳಿಕ ಸ್ಪಷ್ಟಗೊಳ್ಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿದ್ಯಾರ್ಥಿನಿ ನೇಣು ಬಿಗಿದ ಹಾಗೂ ರಸ್ತೆ ಅಪಘಾತಕ್ಕೆ ಸಂಬಂಧಿಸಿ ಬೇಡಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!