- Advertisement -
- Advertisement -
ಕಾಸರಗೋಡು: ಇಲ್ಲಿನ ಚಿತ್ತರಿಕ್ಕಾಲ್ ಸಮೀಪ ಶಬರಿಮಲೆ ಯಾತ್ರಾರ್ಥಿಗಳು ಸಂಚರಿಸುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಓರ್ವ ಮೃತಪಟ್ಟಿದ್ದು, ಕೆಲವರು ಗಾಯಗೊಂಡ ಘಟನೆ ಶನಿವಾರ ಮಧ್ಯಾಹ ನಡೆದಿದೆ.




ಮೃತರನ್ನು ಮೈಸೂರಿನ ಹರೀಶ್ ಎಂದು ಗುರುತಿಸಲಾಗಿದ್ದು, ಮೈಸೂರಿನಿಂದ ಈ ಬಸ್ಸು ಶಬರಿಮಲೆಗೆ ತೆರಳುತ್ತಿತ್ತು ಎನ್ನಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬಸ್ಸು ರಸ್ತೆಯಿಂದ 30 ಅಡಿಯಷ್ಟು ಆಳಕ್ಕೆ ಉರುಳಿ ಬಿದ್ದಿದೆ. ಗಾಯಾಳುಗಳನ್ನು ಸಾರ್ವಜನಿಕರು ಹಾಗೂ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ಸಿನಲ್ಲಿ ಒಟ್ಟು 50 ಯಾತ್ರಾರ್ಥಿಗಳು ಇದ್ದರು ಎನ್ನಲಾಗಿದೆ.

- Advertisement -






