- Advertisement -
- Advertisement -






ಕಾಪು: ಪಾಂಗಳ ವಿದ್ಯಾವರ್ಧಕ ಶಾಲೆಯ ಎದುರು ರಾ.ಹೆ.66ರಲ್ಲಿ ಕಾರೊಂದು ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಚಲಾಯಿಸುತ್ತಿದ್ದ ಮಣಿಪಾಲದ ವಿದ್ಯಾರ್ಥಿಯೋರ್ವ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಎ.17ರಂದು ನಡೆದಿದೆ.
ಮೃತರನ್ನು ಮಣಿಪಾಲದ ಶ್ರೇಯಸ್ ಆಚಾರ್ಯ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಡಾರ್ವಿನ್ ಹಾಗೂ ಸೂರ್ಯ ಎಂಬವರು ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ಮೂವರು ಮಣಿಪಾಲದ ವಿದ್ಯಾರ್ಥಿಗಳಾಗಿದ್ದಾರೆಂದು ತಿಳಿದುಬಂದಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರು, ಅತೀವೇಗ ಹಾಗೂ ಅಜಾಗರೂಕತೆ, ನಿರ್ಲಕ್ಷತನದಿಂದ ಮಂಗಳೂರು ಬಂದರಿನಲ್ಲಿ ಕೋಕ್ ಲೋಡ್ ಮಾಡಿಕೊಂಡು ವಾಪಾಸು ಕೊಪ್ಪಳ ಜಿಲ್ಲೆಯ ಗಿಣಿಗೇರಿಗೆ ಹೋಗುತ್ತಿದ್ದ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ.
ಪರಿಣಾಮ ಕಾರಿನ ಮುಂದಿನ ಬಲಬದಿಯು ಸಂಪೂರ್ಣ ಜಖಂಗೊಂಡಿದೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.
- Advertisement -








