Tuesday, July 21, 2026
spot_imgspot_img
spot_imgspot_img

ಕಾಪು: ಸ್ಕೂಟಿ ಹಿಂಬದಿಗೆ ಬಸ್ ಢಿಕ್ಕಿ; ಬಾಲಕಿ ಸಾವು

- Advertisement -
- Advertisement -

ಉಡುಪಿ : ಉಡುಪಿ ಜಿಲ್ಲೆಯ ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಢಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ ಸವಾರೆಯಾಗಿ ಸಂಚರಿಸುತ್ತಿದ್ದ 8 ವರ್ಷದ ಬಾಲಕಿ ಸಾತ್ವಿ ಶೆಟ್ಟಿ ತೀವ್ರ ಗಾಯಗೊಂಡು ಮೃತ ಪಟ್ಟಿರುವ ಘಟನೆ ನಡೆದಿದೆ.

ಮೃತ ಸಾತ್ವಿ ತನ್ನ ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾಳೆ. ದುಬಾಯಿಯಲ್ಲಿ ವಾಸವಿದ್ದ ಈ ಕುಟುಂಬವು ಮುಂದೆ ಊರಿನಲ್ಲಿಯೇ ನೆಲೆಸುವ ಸಿದ್ದತೆ ನಡೆಸಿತ್ತು.

ಸಾತ್ವಿಗಾಗಿ ನಿನ್ನೆ ಆಕೆಯ ಹೆತ್ತವರು ಉಡುಪಿಯ ಖಾಸಗಿ ಶಾಲೆಯಲ್ಲಿ ಪ್ರವೇಶಾತಿಯನ್ನೂ ಮುಗಿಸಿದ್ದರು. ಇಂದು ಆಕೆಯ ತಂದೆ ನಿತ್ಯಾನಂದ ಶೆಟ್ಟಿ ಅವರು ಮಾತ್ರ ದುಬಾಯಿಗೆ ತೆರಳುವರಿದ್ದು, ಕಾಪು ಪೇಟೆಗೆ ಏನನ್ನೋ ತರಲು ಹೋಗಿ ವಾಪಸಾಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಅಪಘಾತದ ತಾಣಕ್ಕೂ ಅವರ ಪೂವಣಿಗುತ್ತು ಮನೆಗೂ ಕೇವಲ ಅರ್ಧ ಕಿ.ಮೀ. ದೂರವಷ್ಟೇ ಬಾಕಿ ಇತ್ತು. ಸ್ಕೂಟಿ ಸವಾರ ನಿತ್ಯಾನಂದ ಶೆಟ್ಟಿ ಅವರಿಗೂ ಗಾಯಗಳಾಗಿವೆ. ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ ಎಂಬುದಾಗಿ ವರದಿ ಮೂಲಕ ತಿಳಿದುಬಂದಿದೆ.

- Advertisement -

Related news

error: Content is protected !!