Thursday, July 23, 2026
spot_imgspot_img
spot_imgspot_img

ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದ ನಟಿ ಖ್ಯಾತ ನಿರ್ದೇಶಕಿ ರೂಪ ಐಯ್ಯರ್‌

- Advertisement -
- Advertisement -

ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಕನ್ನಡ ಚಿತ್ರರಂಗದ ಹೆಸರಾಂತ ನಿರ್ದೇಶಕಿ ಮತ್ತು ನಟಿ ರೂಪ ಐಯ್ಯರ್ ಭೇಟಿ ನೀಡಿ, ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು.

ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ ಅವರ ಸಮಕ್ಷಮದಲ್ಲಿ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿಯ ಪರವಾಗಿ ಗೌರವಿಸಲಾಯಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.

ದೇವಳದ ಪ್ರಥಮ ಮತ್ತು ದ್ವಿತೀಯ ಹಂತದ ಕಾಮಗಾರಿಯನ್ನು ವೀಕ್ಷಿಸಿ ನಂತರ ನವದುರ್ಗಾಲೇಖನ ಬರೆಯುವ ಸಂಕಲ್ಪ ಮಾಡಿ, ಒಂದು ದಿನದ ಲೇಖನವನ್ನು ಬರೆದರು.

ನಂತರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ಮಾರಿಯಮ್ಮ ದೇವಿಯ ದರುಶನ ಮಾಡೋಕೆ ಸಿಕ್ಕಿರೋದು ನನ್ನ ಸೌಭಾಗ್ಯ, ದೇವಿಯ ಒಂಬತ್ತು ಹೆಸರುಗಳನ್ನು ಬರೆಯುವ ಸೇವೆಯಲ್ಲಿ ನನ್ನಂತೆ ನೀವೆಲ್ಲರೂ ಭಾಗಿಯಾಗಿ. ದೇವಿಯ ಪ್ರೇರಣೆಯಂತೆ ನಾನಿಲ್ಲಿಗೆ ಬಂದು ಸೇವೆ ಸಲ್ಲಿಸಿ, ಪ್ರಾರ್ಥಿಸಿಕೊಂಡಿದ್ದೇನೆ. ಎಲ್ಲರಿಗೂ ಅವಳ ಅನುಗ್ರಹ ಇರಲಿ ಎಂದು ಹೇಳಿದ್ರು. ಈ ಸಂದರ್ಭ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಮತ್ತು ನವದುರ್ಗಾ ಲೇಖನ ಯಜ್ಞದ ಮಹಿಳಾ ಸಮಿತಿ ಪ್ರಧಾನ ಸಂಚಾಲಕಿ ಸಾವಿತ್ರಿ ಗಣೇಶ್ ಮತ್ತಿತ್ತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!