Wednesday, May 15, 2024
spot_imgspot_img
spot_imgspot_img

ಇಂದು ಕನ್ನಡದ ಕವಿ, ಕಾಸರಗೋಡು ಏಕೀಕರಣ ಹೋರಾಟಗಾರ, ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಕಯ್ಯಾರ ಕಿಞ್ಞಣ್ಣ ರೈ ರವರ ಜನುಮ ದಿನ; ಅವರ ಕುರಿತು ಒಂದಿಷ್ಟು ಮಾಹಿತಿ

- Advertisement -G L Acharya panikkar
- Advertisement -

ಕಯ್ಯಾರ ಕಿಞ್ಞಣ್ಣ ರೈ ಅಖಿಲ ಕರ್ನಾಟಕದ ಮಹಾ ಕವಿಯಾಗಿ, ಹಿರಿಯ ಸಾಹಿತಿಯಾಗಿ, ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ, ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯ ನಾಯಕರಾಗಿ, ಕಾಸರಗೋಡು ವಿಲೀನೀಕರಣ ಕ್ರಿಯಾ ಸಮಿತಿಯ ಪ್ರಧಾನ ಸಂಚಾಕರಾಗಿ, ನಿರಂತರವಾಗಿ ದುಡಿದವರು ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈರವರು.

ಕಯ್ಯಾರ ಕಿಞ್ಞಣ್ಣ ರೈ ಅವರು ಕೇರಳ ರಾಜ್ಯದಲ್ಲಿರುವ ಕಾಸರಗೋಡು ತಾಲೂಕಿನ ಪೆರಡಾಲ ಗ್ರಾಮದಲ್ಲಿ 1915 ಜೂನ 8 ರಂದು ಜನಿಸಿದರು. ತಂದೆ ದುಗ್ಗಪ್ಪ ರೈ, ತಾಯಿ ದೈಯಕ್ಕೆ. ಕಯ್ನಾರರು ಉಞ್ಞಕ್ಕ ಅವರನ್ನು ಬಾಳ ಸಂಗಾತಿಯಾಗಿ ಸ್ವೀಕರಿಸಿ ಆರು ಮಂದಿ ಗಂಡು ಮಕ್ಕಳು ಹಾಗೂ ಇಬ್ಬರು ಹೆಣ್ಣು ಮಕ್ಕಳ ತುಂಬು ಸಂಸಾರದೊಂದಿಗೆ ಬದಿಯಡ್ಕ ಪೆರಡಾಲ “ಕವಿತಾ ಕುಟೀರ”ದಲ್ಲಿ ನೆಮ್ಮದಿಯ ಜೀವನ ನಡೆಸಿದರು.

ಶ್ರೀಯುತರು ಬದುಕಿ ಬಾಳಿದ್ದು ಕಾಸರಗೋಡು ಜಿಲ್ಲೆಯ ಕಯ್ಯಾರ ಗ್ರಾಮದಲ್ಲಿ. ಹಾಗಾಗಿ ಕಯ್ಯಾರ ಇವರ ಹೆಸರಿನೊಂದಿಗೆ ಬೆಸೆದುಕೊಂಡಿತು. ರೈಯವರು ಸಂಸ್ಕೃತ ಮತ್ತು ಕನ್ನಡ ಭಾಷೆಗಳಲ್ಲಿ ವಿದ್ವಾನ್ ಪದವಿ ಪಡೆದ ಬಳಿಕ ಬಿ.ಎ.ಪದವಿಯನ್ನು ಪಡೆದು ಅಧ್ಯಾಪಕ ತರಬೇತಿಯನ್ನು ಪೂರೈಸಿದರು. ಬಳಿಕ ಎಂ.ಎ. ಸ್ನಾತಕೋತ್ತರ ಪದವೀಧರರೂ ಆದರು. ಕಾಸರಗೋಡಿನ ಬಳಿಯ ಪೆರಡಾಲ ಗ್ರಾಮದ ನವಜೀವನ ಪ್ರೌಢಶಾಲೆಯಲ್ಲಿ ಅಧ್ಯಾಪಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ರೈಗಳ ಮನೆಮಾತು ತುಳು.

ರೈಗಳು ಹಲವು ತುಳು ಕವನಗಳನ್ನು, ಲೇಖನಗಳನ್ನು ಬರೆದಿದ್ದಾರೆ. ‘ಪರಿವು ಕಟ್ಟುಜಿ, ರಡ್ಡ್ ಕಣ್ಣ್ಡ್’ ‘ಸಾರೊ ಎಸಳ್ದ ತಾಮರೆ’ ‘ಲೆಪ್ಪುನ್ಯೇರ್?’ ‘ಬತ್ತನೊ ಈ ಬರ್ಪನೊ’ – ಇವು ರೈಗಳ ಕೆಲವು ತುಳು ಕವನಗಳು. ರೈಗಳ ಕನ್ನಡ ಕವಿತೆಗಳಲ್ಲಿ ಹೆಚ್ಚಾಗಿ ಕಾಣಸಿಗದ ಪ್ರಾದೇಶಿಕ ರಂಗು, ಜಾನಪದ ಲೋಕ ಅವರ ತುಳು ಕವಿತೆಗಳಲ್ಲಿ ಅರಳಿಕೊಳ್ಳುತ್ತದೆ.ಪತ್ರಕರ್ತರಾಗಿ: ಪ್ರಭಾತ, ರಾಷ್ಟ್ರಬಂಧು, ಸ್ವದೇಶಾಭಿಮಾನಿ ಎನ್ನುವ ಕನ್ನಡ ಪತ್ರಿಕೆಗಳಲ್ಲಿ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

‘ಕಯ್ಯಾರ ಕಿಞ್ಞಣ್ಣ ರೈ’ ಅವರುಶ್ರೀಮುಖ, ಐಕ್ಯಗಾನ, ಪುನರ್ನವ, ಚೇತನ, ಕೊರಗ, ಶತಮಾನದ ಗಾನ, ಗಂಧವತಿ, ಪ್ರತಿಭಾ ಪಯಸ್ವಿನಿ, ಮೊದಲಾದ ಕನ್ನಡ ಕವನ ಸಂಕಲನಗಳನ್ನಲ್ಲದೆ ಒಂದು ತುಳು ಕವನ ಸಂಕಲನವನ್ನೂ ಹೊರ ತಂದಿದ್ದಾರೆ. ಕಾರ್ನಾಡ ಸದಾಶಿವರಾವ, ರತ್ನರಾಜಿ, ಏ.ಬಿ.ಶೆಟ್ಟಿ ಮೊದಲಾದವರ ಜೀವನಚರಿತ್ರೆಗಳನ್ನು ಹಾಗು ಕಥಾಸಂಗ್ರಹಗಳನ್ನು ಬರೆದು ಪ್ರಕಟಿಸಿದ್ದಾರೆ.

ರಾಷ್ಟ್ರಕವಿ ಗೋವಿಂದ ಪೈಯವರ ಬಗೆಗೆ ಮೂರು ಗ್ರಂಥಗಳನ್ನು ಬರೆದಿದ್ದಾರೆ. ಪಂಚಮಿ ಮತ್ತು ಆಶಾನ್ರ ಖಂಡಕಾವ್ಯಗಳು ಎನ್ನುವ ಎರಡು ಅನುವಾದ ಕೃತಿಗಳನ್ನು ರಚಿಸಿದ್ದಾರೆ. ಸಾಹಿತ್ಯ ದೃಷ್ಟಿ ಎನ್ನುವ ಲೇಖನಸಂಕಲನ ಪ್ರಕಟಿಸಿದ್ದಾರೆ.

- Advertisement -

Related news

error: Content is protected !!