- Advertisement -
- Advertisement -



ಕೆದೂರು: ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ಕೆದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಉಳ್ಳೂರು ಆಟದ ಮೈದಾನದ ಬಳಿ ನಡೆದಿದೆ.
ಘಟನೆಯಲ್ಲಿ ವಾಹನದಲ್ಲಿದ್ದ ಐವರು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಕೋಟೇಶ್ವರ ಬಳಿಯ ಮಾರ್ಕೋಡುವಿನ ಯುವಕರು ಮನೆಗೆ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತದ ಪರಿಣಾಮ ರಸ್ತೆ ಬದಿಯ ವಿದ್ಯುತ್ ಕಂಬಗಳು ಧರೆಗುರುಳಿದ್ದು, ಕಾರಿಗೆ ತೀವ್ರ ಹಾನಿಯಾಗಿದೆ.
- Advertisement -








