Sunday, June 29, 2025
spot_imgspot_img
spot_imgspot_img

ಅಂಬೇಡ್ಕರ್ ಹೆಸರಿನಲ್ಲಿ ಸ್ಕಾಲರ್‌ಶಿಪ್ ಯೋಜನೆ ಘೋಷಿಸಿದ ಕೇಜ್ರಿವಾಲ್

- Advertisement -
- Advertisement -

ನವದೆಹಲಿ: ಡಾ. ಬಿ.ಆರ್ ಅಂಬೇಡ್ಕರ್ ಅವರ ವಿಚಾರಕ್ಕೆ ಸಂಬಂಧಿಸಿದಂತೆ ಸದ್ದು ಗದ್ದಲಗಳು ನಡೆಯುತ್ತಿರುವ ಹೊತ್ತಲ್ಲೇ ದಲಿತ ವಿದ್ಯಾರ್ಥಿಗಳಿಗೆ ಅಂಬೇಡ್ಕರ್ ಅವರ ಹೆಸರಿನ ವಿದ್ಯಾರ್ಥಿ ವೇತನ ಯೋಜನೆಯನ್ನು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.

ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆ ಪ್ರಚಾರ ನಡೆಸುತ್ತಿರುವ ಕೇಜ್ರಿವಾಲ್ ಹೊಸ ಯೋಜನೆ ಘೋಷಿಸಿದರು. ಸಂವಿಧಾನದ ಪಿತಾಮಹ ಬಾಬಾ ಸಾಹೇಬರ ವಿರುದ್ಧ ಅಮಿತ್ ಶಾ ಅವರ ಅಗೌರವ ಹೇಳಿಕೆಗೆ ಪ್ರತಿಕ್ರಿಯೆಯಾಗಿ “ಡಾ.ಅಂಬೇಡ್ಕರ್ ಸಮ್ಮಾನ್” ವಿದ್ಯಾರ್ಥಿ ವೇತನವನ್ನು ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಗೆದ್ದರೆ ವಿದೇಶಿ ವಿಶ್ವವಿದ್ಯಾಲಯಗಳಿಗೆ ಪ್ರವೇಶ ಪಡೆದ ದಲಿತ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರ ಧನಸಹಾಯ ನೀಡಲಿದೆ.

- Advertisement -

Related news

error: Content is protected !!