- Advertisement -
- Advertisement -




ವಿಟ್ಲ: ಜುಲೈ 4 ರಂದು ಕೆಲಿಂಜ ಸಮೀಪದ ಪೆಲತ್ತಡ್ಕದಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಾಗಿದ್ದ ಬೋಳಂತೂರು ದಂಡೆಮಾರ್ ನಿವಾಸಿ ಅಬ್ದುನ್ನಾಸಿರ್ (ನಾಸಿರ್ ದಂಡೆಮಾರ್) ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು (ಜುಲೈ 11) ಕೊನೆಯುಸಿರೆಳೆದಿದ್ದಾರೆ.
ಕಳೆದ ವಾರ (ಜುಲೈ 4 ರಂದು) ನಾಸಿರ್ ಅವರು ಬೈಕ್‌ನಲ್ಲಿ ಚಲಿಸುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ಬೈಕ್ ಸವಾರ ನಾಸಿರ್ ಅವರ ತಲೆ ಹಾಗೂ ದೇಹದ ಇತರೆ ಭಾಗಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದವು. ತಕ್ಷಣವೇ ಅವರನ್ನು ಮಂಗಳೂರಿನ ಎ.ಜೆ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ (ICU) ತುರ್ತು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಮೃತಪಟ್ಟಿದ್ದಾರೆ.
- Advertisement -








