Friday, March 29, 2024
spot_imgspot_img
spot_imgspot_img

ಖೇಲೋ ಇಂಡಿಯಾ ಯೋಜನೆ ಕ್ರೀಡಾಪಟುಗಳು ಮಿಂಚಲು ಸಹಕಾರಿ: ಶಾಸಕ ಕಾಮತ್

- Advertisement -G L Acharya panikkar
- Advertisement -

ಮಂಗಳೂರು: ಕೇಂದ್ರ ಸರ್ಕಾರವು ಖೇಲೋ ಇಂಡಿಯಾ ಯೋಜನೆಯ ಮೂಲಕ ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುತ್ತಿದೆ. ಇದರಿಂದ ಭವಿಷ್ಯದಲ್ಲಿ ಮತ್ತಷ್ಟು ಕ್ರೀಡಾಪಟುಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಲು ಸಹಕಾರಿಯಾಗಲಿದೆ ಎಂದು ಶಾಸಕ ಡಿ. ವೇದವ್ಯಾಸ ಕಾಮತ್ ಹೇಳಿದರು.


ರಾಷ್ಟ್ರೀಯ ಕ್ರೀಡಾ ದಿನಾಚರಣೆ-2020 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಒಲಿಂಪಿಕ್ ಕ್ರೀಡೆಯಲ್ಲಿ 3 ಬಾರಿ ಪದಕ ಗೆಲ್ಲುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಹಾಕಿ ಮಾಂತ್ರಿಕ ಧ್ಯಾನ್ ಚಂದ್​ರದ್ದು ಕ್ರೀಡಾಕ್ಷೇತ್ರಕ್ಕೆ ಕೊಡುಗೆ ಅಪಾರ ಎಂದರು.ಇತ್ತೀಚಿನ ದಿನಗಳಲ್ಲಿ ಮಕ್ಕಳು, ಯುವಜನತೆ ಸೇರಿದಂತೆ ಮೊಬೈಲ್, ಸಾಮಾಜಿಕ ಜಾಲತಾಣಗಳಲ್ಲಿ ಆನ್‍ಲೈನ್ ಆಟಗಳಿಗೆ ಹೆಚ್ಚಿನ ಒಲವು ತೋರುತ್ತಿದ್ದು, ಕ್ರೀಡಾಂಗಣದಲ್ಲಿ ಆಡುವವರ ಸಂಖ್ಯೆ ವಿರಳವಾಗಿದೆ. ಈ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ವಿವಿಧ ಕ್ರೀಡಾ ಸಂಘಗಳಿಗೆ ಕ್ರೀಡಾ ಸಾಮಗ್ರಿಗಳನ್ನು ಒದಗಿಸಿ ಉತ್ತೇಜನ ನೀಡುತ್ತಿರುವುದಕ್ಕೆ ಅಭಿನಂದನೆ. ಸ್ಮಾರ್ಟ್ ಸಿಟಿ ಯೋಜನೆ ಮೂಲಕ ವ್ಯವಸ್ಥಿತವಾದ ಕ್ರೀಡಾಂಗಣ ನಿರ್ಮಾಣಗೊಳ್ಳುತ್ತಿದ್ದು, ಈ ಮೂಲಕ ಕ್ರೀಡೆಗೆ ಪ್ರೋತ್ಸಾಹ ನೀಡಲಾಗುತ್ತಿದೆ ಎಂದು ಹೇಳಿದರು.


ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ಕಸ್ತೂರಿ ಪಂಜ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ, ನೆಹರು ಯುವ ಕೇಂದ್ರದ ಸಮನ್ವಯ ಅಧಿಕಾರಿ ರಘುವೀರ್ ಸೂಟರ್‍ಪೇಟೆ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!