- Advertisement -
- Advertisement -




ಕೇಪು: ಕೇಪು ಗ್ರಾಮದ ನೀರ್ಕಜೆಯಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರುರವರ 2025-26 ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ರೂಪಾಯಿ 5.00 ಲಕ್ಷ ವೆಚ್ಚದಲ್ಲಿ ಸಾರ್ವಜನಿಕರಿಗೆ ತಂಗುದಾಣ ಮತ್ತು ರಿಕ್ಷಾ ತಂಗುದಾಣ ಕಾಮಗಾರಿಯನ್ನು ಉದ್ಘಾಟಿಸಲಾಯಿತು.
ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಹಾಲಿಂಗ ನಾಯ್ಕರವರು, ಕೇಪು ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು ಸರ್ವಸದಸ್ಯರು ಮತ್ತು ಭಾರತೀಯ ಜನತಾ ಪಾರ್ಟಿಯ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಉಜಿರ್ಮಾರ್, ಉಪಾಧ್ಯಕ್ಷರು, ಪದಾಧಿಕಾರಿಗಳು ಮತ್ತು ಪಂಚಾಯತ್ ಅಭಿವೃದ್ಧಿ ಕಾರ್ಯದರ್ಶಿ ಮತ್ತು ರಿಕ್ಷಾ ಚಾಲಕರು,ಗ್ರಾಮದ ಹಿರಿಯ ನಾಗರಿಕರು ಗ್ರಾಮಸ್ಥರು ಉಪಸ್ಥಿತರಿದ್ದರು.
- Advertisement -








