Thursday, December 5, 2024
spot_imgspot_img
spot_imgspot_img

ಕೇರಳದ ಮುನ್ನಾರ್ ನಲ್ಲಿ ಭೂಕುಸಿತ: ಸಾವಿನ ಸಂಖ್ಯೆ 13ಕ್ಕೆ ಏರಿಕೆ

- Advertisement -
- Advertisement -

ಕೇರಳದ ಮುನ್ನಾರ್ ನಲ್ಲಿ ಪೆಟ್ಟಿಮುಡಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಈವರೆಗೆ ಸುಮಾರು 12 ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸುಮಾರು 80ಕ್ಕೂ ಅಧಿಕ ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ.

ಅಗ್ನಿಶಾಮಕ ದಳದ ವಿಶೇಷ ಟಾಸ್ಕ್ ಪೋರ್ಸ್ ತಂಡವನ್ನು ರಾಜಮಲೈಗೆ ಕಳುಹಿಸಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮಾಡಿದ್ದಾರೆ.

ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನ ರಾಜಮಲೈನಲ್ಲಿ ಇಂದು ಬೆಳಗ್ಗಿನ ಜಾವ ಈ ಘಟನೆ ಸಂಭವಿಸಿದೆ. ಭೂಕುಸಿತಕ್ಕೆ ಕ್ವಾರ್ಟರ್ಸ್ ಮತ್ತು ಚರ್ಚ್ ಕಟ್ಟಡ ಧರೆಗುರುಳಿ ಸುಮಾರು 80 ಮಂದಿ ಸಿಕ್ಕಿಹಾಕಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಅವಶೇಷಗಳಡಿಯಲ್ಲಿ ಸಿಕ್ಕಿಹಾಕಿಕೊಂಡವರನ್ನು ಬೇಗನೆ ಹೊರತೆಗೆಯಲು ಸಾಧ್ಯವಾಗುತ್ತಿಲ್ಲ. ಇವರಲ್ಲಿ ಬಹುತೇಕರು ಟೀ ಎಸ್ಟೇಟ್ ನಲ್ಲಿ ಕೆಲಸ ಮಾಡುವ ಕಾರ್ಮಿಕರಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!