- Advertisement -
- Advertisement -



ಉಡುಪಿ: ಅಪಾರ್ಟ್‌ಮೆಂಟ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಕೇರಳದ ವಿದ್ಯಾರ್ಥಿಯನ್ನು ಮಣಿಪಾಲ ಪೊಲೀಸರು ಜೂ.5ರಂದು ಸಂಜೆ ವೇಳೆ ಬಂಧಿಸಿದ್ದಾರೆ.
ಆರೋಪಿಯನ್ನು ಸಿದ್ದಾರ್ಥ್(22) ಎಂದು ಗುರುತಿಸಲಾಗಿದೆ.
ಬಂಧಿತ ವ್ಯಕ್ತಿಯು ಮಣಿಪಾಲದ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುವ ಉದ್ದೇಶ ಹೊಂದಿದ್ದ ಎಂದು ತಿಳಿದುಬಂದಿದೆ. ಆರೋಪಿಯಿಂದ ಸುಮಾರು .20 ಸಾವಿರ ಮೌಲ್ಯದ 388 ಗ್ರಾಂ ತೂಕದ ಡ್ರಗ್ಸ್ ಹಾಗೂ ಮೊಬೈಲ್ ಫೋನ್ ಹ್ಯಾಂಡ್ ಸೆಟ್ 45 ಸಾವಿರ ವಶಪಡಿಸಿಕೊಂಡಿದ್ದಾರೆ.
ಉಡುಪಿ ತಾಲೂಕಿನ ಹೆರ್ಗ ಗ್ರಾಮದ ಅಪಾರ್ಟ್‌ಮೆಂಟ್‌ನ ಮೇಲೆ ಮಾದಕ ವಸ್ತು ಚಟುವಟಿಕೆ ಬಗ್ಗೆ ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್ ದೇವರಾಜ್ ಟಿ ವಿ ಮತ್ತು ಸಬ್ ಇನ್ಸ್‌ಪೆಕ್ಟರ್ ರಾಘವೇಂದ್ರ ಸಿ, ಎಎಸ್‌ಐಗಳಾದ ವಿವೇಕಾನಂದ ಮತ್ತು ಶೈಲೇಶ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಲಾಯಿತು.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
- Advertisement -








