Thursday, March 28, 2024
spot_imgspot_img
spot_imgspot_img

ಕೇರಳದಿಂದ ಬಂದಿದ್ದ 21 ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಕೊರೊನಾ..!

- Advertisement -G L Acharya panikkar
- Advertisement -

ಹಾಸನ : ಹಾಸನ ಜಿಲ್ಲೆಯಲ್ಲಿ ಕೇರಳದಿಂದ ಪರೀಕ್ಷೆಗೆ ಹಾಜರಾಗಲು ಬಂದಿದ್ದ ಒಂದೇ ಕಾಲೇಜಿನ 21 ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು ಆತಂಕ ಮೂಡಿಸಿದೆ. ಹಾಸನ ನಗರದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿರುವ ಕೇರಳ ಮೂಲದ 21 ವಿದ್ಯಾರ್ಥಿನಿಯರಿಗೆ ಕೊರೊನಾ ಪಾಸಿಟಿವ್ ವರದಿಯಾಗಿರುವುದಾಗಿ ಹಾಸನ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸತೀಶ್ ಖಚಿತಪಡಿಸಿದ್ದಾರೆ.

ಎಲ್ಲಾ ವಿದ್ಯಾರ್ಥಿಗಳು ಕೆಆರ್ ಪುರಂನಲ್ಲಿ ಇರುವಂತಹ ಖಾಸಗಿ ಪಿಜಿಯಲ್ಲಿ ಇದ್ದುಕೊಂಡು ನರ್ಸಿಂಗ್ ಶಿಕ್ಷಣ ಪಡೆಯುತ್ತಿದ್ದಾರೆ . ಎಲ್ಲಾ ವಿದ್ಯಾರ್ಥಿಗಳೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 27 ವಿದ್ಯಾರ್ಥಿನಿಯರನ್ನು ಈಗಾಗಲೇ ಖಾಸಗಿ ವಸತಿಗೃಹದಲ್ಲಿ ಕ್ವಾರಂಟೈನಲ್ಲಿ ಇಡಲಾಗಿದ್ದು ಅವರಿಗೂ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ಹಾಸನ ನಗರದಲ್ಲಿ ದಿನನಿತ್ಯ ಕೊರೊನಾ ಪಾಸಿಟಿವ್ ಪ್ರಕರಣದ ಸಂಖ್ಯೆ ಏರಿಕೆಯಾಗುತ್ತಿರುವ ಬೆನ್ನಲ್ಲೇ ಕೇರಳ ಮೂಲದ 21 ಕಾಲೇಜು ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಈಗಾಗಲೇ ಮೂರನೇ ಅಲೆ ಭೀತಿ ಎದುರಾಗಿದ್ದು, ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಹರಡುತ್ತಿರುವುದು ಹೆಚ್ಚು ಅಪಾಯಕಾರಿ ಬೆಳವಣಿಗೆಯಾಗಿದೆ.

- Advertisement -

Related news

error: Content is protected !!