Friday, May 3, 2024
spot_imgspot_img
spot_imgspot_img

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ; ದ.ಕ ಜಿಲ್ಲೆಯಲ್ಲಿ ರೋಗ ಹರಡದಂತೆ ಕಟ್ಟೆಚ್ಚರ

- Advertisement -G L Acharya panikkar
- Advertisement -

ಮಂಗಳೂರು: ಕೇರಳದಲ್ಲಿ ಹಂದಿಗಳಲ್ಲಿ ಆಫ್ರಿಕನ್ ಹಂದಿ ಜ್ವರ ರೋಗ ದೃಡಪಟ್ಟಿದ್ದು, ಈ ಹಿನ್ನೆಲೆಯಲ್ಲಿ ಕೇರಳಕ್ಕೆ ಹೊಂದಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೋಗ ಹರಡದಂತೆ ಅಗತ್ಯ ಮುನ್ನೆಚ್ಛರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲೆಯ ಪಶುಪಾಲನಾ ಮತ್ತು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಆಫ್ರಿಕನ್ ಹಂದಿ ಜ್ವರವು ಸಾಕು ಮತ್ತು ಕಾಡು ಹಂದಿಗಳಲ್ಲಿ ವೈರಾಣುನಿಂದ ಬರುವ ಸಾಂಕ್ರಮಿಕ ರೋಗವಾಗಿದ್ದು, ಸಾವಿನ ಪ್ರಮಾಣವು ಶೇ.100ರವರೆಗೂ ತಲುಪಬಹುದಾಗಿದೆ. ಈ ರೋಗಕ್ಕೆ ನಿರ್ದಿಷ್ಟವಾದ ಚಿಕಿತ್ಸೆ ಹಾಗೂ ಲಸಿಕೆ ಇಲ್ಲದಿರುವುದರಿಂದ ನಿಯಮಾನುಸಾರ ರೋಗ ದೃಢೀಕರಣಗೊಂಡ ಪ್ರದೇಶದ 1 ಕಿ.ಮೀ ವ್ಯಾಪ್ತಿಯಲ್ಲಿರುವ ಹಂದಿಗಳನ್ನು ವಧೆ ಮಾಡಬೇಕಾಗಿದೆ.

ಶೇ.100 ರಷ್ಟು ಸಾವಿನ ಪ್ರಮಾಣ ಇರುವುದರಿಂದ ಹಂದಿ ಸಾಕಾಣಿಕೆದಾರರಿಗೆ ಆರ್ಥಿಕ ನಷ್ಟ ಉಂಟಾಗುತ್ತದೆ. ಈ ವೈರಸ್‌ನಿಂದ ಮನುಷ್ಯರಿಗೆ ಯಾವುದೇ ರೋಗ ಹರಡುವುದಿಲ್ಲ ಎಂದಿದ್ದಾರೆ. ಈ ರೋಗವು ಕರ್ನಾಟಕಕ್ಕೆ ಹರಡಂತೆ ತಡೆಗಟ್ಟಲು ಕೇರಳ ರಾಜ್ಯಕ್ಕೆ ಸಂಪರ್ಕಿಸುವ ಗಡಿ ಭಾಗದಲ್ಲಿ ಚೆಕ್‍ಪೋಸ್ಟ್ ಗಳನ್ನು ತೆರೆದು ಹಂದಿ ಹಾಗೂ ಹಂದಿ ಮಾಂಸಗಳ ಸಾಗಾಣಿಕೆ ಮೇಲೆ ನಿಗಾ ವಹಿಸಲಾಗಿದೆ.

ಜಿಲ್ಲೆಯ ಎಲ್ಲಾ ಹಂದಿ ಸಾಕಾಣಿಕೆದಾರರಿಗೆ ರೋಗ ಬರದ ಹಾಗೆ ಮುಂಜಾಗ್ರತೆ ಕ್ರಮವಹಿಸಲು ಸೂಚಿಸಲಾಗಿದೆ. ಪಶು ಪಾಲನಾ ಇಲಾಖೆಯ ಪಶುವೈದ್ಯಾಧಿಕಾರಿಗಳಿಗೆ ತಮ್ಮ ವ್ಯಾಪ್ತಿಯ ಎಲ್ಲಾ ಹಂದಿ ಫಾರಂಗಳಿಗೆ ಭೇಟಿ ನೀಡಿ ಹಂದಿ ಸಾಕಾಣಿಕೆದಾರರಿಗೆ ಈ ಬಗ್ಗೆ ಸಲಹೆ ನೀಡುವಂತೆ ನಿರ್ದೇಶನ ಕೊಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಫ್ರಿಕನ್ ಹಂದಿ ಜ್ವರವು ಈ ವರ್ಷ ಇದುವರೆಗೆ ಕಂಡು ಬಂದಿಲ್ಲ. ಹಾಗಾಗಿ ಹಂದಿ ಸಾಕಾಣಿಕೆದಾರರು ಮತ್ತು ಸಾರ್ವಜನಿಕರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದವರು ತಿಳಿಸಿದ್ದಾರೆ.

- Advertisement -

Related news

error: Content is protected !!