Saturday, April 27, 2024
spot_imgspot_img
spot_imgspot_img

ಕೇರಳದ ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಆತ್ಮಹತ್ಯೆ!

- Advertisement -G L Acharya panikkar
- Advertisement -

ಕೇರಳದ ಮೊದಲ ತೃತೀಯ ಲಿಂಗಿ ರೇಡಿಯೋ ಜಾಕಿ ಅನನ್ಯ ಕುಮಾರಿ ಅಲೆಕ್ಸ್ ಅವರು ಮಂಗಳವಾರ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ವರದಿಯಾಗಿದೆ. ಅನನ್ಯ ಅವರು ಕೇರಳ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ ಮೊದಲ ತೃತೀಯ ಲಿಂಗಿಯಾಗಿದ್ದರು. ಅನಾರೋಗ್ಯದಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಕೊಚ್ಚಿಯಲ್ಲಿರುವ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅನನ್ಯ ಅವರ ಮೃತದೇಹ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುವುದು ಇನ್ನು ತಿಳಿದುಬಂದಿಲ್ಲ. ಕಳೆದ ವರ್ಷ ಜೂನ್ ತಿಂಗಳಲ್ಲಿ ಆರು ಬಾರಿ ಲಿಂಗ ಪುನರ್ವಿತರಣೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎನ್ನಲಾಗಿದೆ.

ಚಿಕಿತ್ಸೆ ನೀಡಿದ್ದ ವೈದ್ಯರು ಮತ್ತು ಆಸ್ಪತ್ರೆ ವಿರುದ್ಧ ಅನನ್ಯ ಕುಮಾರಿ ಅನೇಕ ಆರೋಪಗಳನ್ನು ಮಾಡಿದ್ದರು. ಚಿಕಿತ್ಸೆ ಪಡೆದ ಬಳಿಕ ಅನೇಕ ಆರೋಗ್ಯ ಸಮಸ್ಯೆಗಳಿಂದ ಎದುರಿಸುತ್ತಿದ್ದೇನೆ ಎಂದು ದೂರಿದ್ದರು. ದಿನದಿಂದ ದಿನಕ್ಕೆ ಆರೋಗ್ಯ ಹದಗೆಡುತ್ತಿದೆ. ಇದಕ್ಕೆಲ್ಲ ಕಾರಣ ಆಸ್ಪತ್ರೆಯವರು ಎಂದು ಆರೋಪಿಸಿ ಪರಿಹಾರ ಕೊಡಿಸಿ ಎಂದು ಒತ್ತಾಯ ಮಾಡಿದ್ದರು.

ಅನನ್ಯ ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಯೂನಿಕ್ ಡೆಮಾಕ್ರಟಿಕ್ ಸೋಷಿಯಲ್ ಜಸ್ಟೀಸ್ ಪಾರ್ಟಿ (ಡಿಎಸ್‌ಜೆಪಿ) ಅಭ್ಯರ್ಥಿಯಾಗಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಅಭ್ಯರ್ಥಿ ಪಿ.ಕೆ.ಕುನ್ಹಾಲಿಕುಟ್ಟಿ ವಿರುದ್ಧ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸಿದ್ದರು. ಆದರೆ, ಚುನಾವಣೆಗೆ ಪ್ರಚಾರವನ್ನು ನಿಲ್ಲಿಸಿದ್ದರು. ತನ್ನದೇ ಪಕ್ಷದ ನಾಯಕರಿಂದ ಬೆದರಿಕೆ ಇದೆ ಎಂದು ಅನನ್ಯ ಆರೋಪ ಮಾಡಿದ್ದರು. ಅಲ್ಲದೆ, ಚುನಾವಣೆಯಿಂದ ಹಿಂದೆ ಸರಿದಿದ್ದರು. ಆದರೆ, ಪಕ್ಷದ ಪರವಾಗಿ ಮತಯಾಚನೆ ಮಾಡಿದ್ದರು.

- Advertisement -

Related news

error: Content is protected !!