Tuesday, July 21, 2026
spot_imgspot_img
spot_imgspot_img

ಕೆಯ್ಯೂರು: ಪ್ರಗತಿ ಬಂಧು ಒಕ್ಕೂಟಗಳ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ, 1001 ಹೊಸ ಸದಸ್ಯರ ಸೇರ್ಪಡೆ

- Advertisement -
- Advertisement -

ಕೆಯ್ಯೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಮತ್ತೂರು ಹಾಗೂ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕೆಯ್ಯೂರು ಇವರ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಧಾರ್ಮಿಕ ಸಭೆ ಹಾಗೂ ಸ್ವ-ಸಹಾಯ ಸಂಘಗಳಿಗೆ 1001 ಹೊಸ ಸದಸ್ಯರ ಸೇರ್ಪಡೆ ಕಾರ್ಯಕ್ರಮವನ್ನು ಡಿ.21ರಂದು ಆದಿತ್ಯವಾರ ಆಯೋಜಿಸಲಾಗಿದೆ.

ಕೆದಂಬಾಡಿ ವಲಯದ ದೇರ್ಲ, ದೇವಿನಗರ, ಬೊಳಿಕ್ಕಳ, ಪಾಲ್ತಾಡಿ, ಕೊಳ್ತಿಗೆ, ಪೆರ್ಲಂಪಾಡಿ, ಮೊಗಪ್ಪೆ ಹಾಗೂ ಮಣಿಕ್ಕರ ಒಕ್ಕೂಟಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆಯವರ ಆಶೀರ್ವಾದಗಳೊಂದಿಗೆ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮವು ಕೆಯ್ಯೂರು ಜಯ ಕರ್ನಾಟಕ ಸಭಾಭವನದಲ್ಲಿ ನಡೆಯಲಿದ್ದು, ಭಕ್ತರು ಹಾಗೂ ಸ್ವ-ಸಹಾಯ ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

- Advertisement -

Related news

error: Content is protected !!