Saturday, July 25, 2026
spot_imgspot_img
spot_imgspot_img

ಕೆಜಿ ಹಳ್ಳಿ ಗಲಭೆ:ಮತ್ತೋರ್ವ ಪ್ರಮುಖ ಆರೋಪಿ ವಾಜಿದ್ ಪಾಷಾ ಅರೆಸ್ಟ್ .

- Advertisement -
- Advertisement -

ವರದಿ: ನ್ಯೂಸ್ ಡೆಸ್ಕ್, ವಿ ಟಿವಿ

ಬೆಂಗಳೂರು: ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿ ಕರ್ನಾಟಕ ಟಿಪ್ಪು ಟೈಗರ್ ಅಲ್ಪತ್ ಟ್ರಸ್ಟ್ ಅಧ್ಯಕ್ಷ ಕೆ.ವಾಜಿದ್ ಪಾಷಾ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ವಾಜೀದ್ ನನ್ನು ಭಾನುವಾರ ತಡರಾತ್ರಿ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಪುಲಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಎಂದು ವಾಜಿದ್ ಪಾಷಾ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದ. ನಂತರ ಶ್ರೀನಿವಾಸ ಮೂರ್ತಿ ಬೆಂಬಲಿಗರು ವಾಜೀದ್ ವಿರುದ್ದ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಳಿಕ 2 ಕಡೆಯವರನ್ನು ರಾಜಿ ಸಂಧಾನ ಮಾಡಿ ಪೊಲೀಸರು ಕಳುಹಿಸಿದ್ದರು.

ಇದಲ್ಲದೇ, ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಆರೋಪಿ ನವೀನ್ ವಿರುದ್ಧ ದೂರು ನೀಡಿದ್ದ ಗುಂಪಿನಲ್ಲಿ ವಾಜೀದ್ ಕೂಡ ಇದ್ದ. ಈ ವೇಳೆ ನವೀನ್ ಅರೆಸ್ಟ್ ಮಾಡಲು 2 ಗಂಟೆ ತೆಗೆದುಕೊಳ್ಳುತ್ತೀರಿ. ನಮ್ಮನ್ನಾದರೇ 5 ಸೆಕೆಂಡಿನಲ್ಲಿ ಅರೆಸ್ಟ್ ಮಾಡುತ್ತೀರ ಎಂದು ಪೊಲೀಸರ ಮೇಲೆ ಕೂಗಾಡಿದ್ದ ಎನ್ನಲಾಗಿದೆ.

- Advertisement -

Related news

error: Content is protected !!