Friday, May 23, 2025
spot_imgspot_img
spot_imgspot_img

ಕೆ.ಜಿ.ಹಳ್ಳಿ ಗಲಭೆ: ರಾತ್ರೋರಾತ್ರಿ 80 ಆರೋಪಿಗಳು ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್

- Advertisement -
- Advertisement -

ಬೆಂಗಳೂರು: ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಪ್ರಕರಣದ ಬಂಧಿತ ಸುಮಾರು 80 ಆರೋಪಿಗಳನ್ನು ರಾತ್ರೋ ರಾತ್ರಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿದೆ.

ಮಂಗಳವಾರ ರಾತ್ರಿ ನಡೆದ ಕೆ.ಜಿ.ಹಳ್ಳಿ ಹಾಗೂ ಡಿ.ಜೆ.ಹಳ್ಳಿ ಗಲಭೆ ಕೇಸ್ ಗೆ ಸಂಬಂಧಿಸಿ ಸುಮಾರು 200ಕ್ಕೂ ಅಧಿಕ ಮಂದಿ ಅರೆಸ್ಟ್ ಆಗಿದ್ದಾರೆ. ಈ ಪೈಕಿ ಸುಮಾರು 80 ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹೀಗಾಗಿ ಇವರನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

ಬಂಧಿತರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನಿನ್ನೆ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಎಲ್ಲ ಆರೋಪಿಗಳನ್ನು ಬೆಂಗಳೂರಿನಲ್ಲಿ ಇರಿಸಿದ್ರೆ ಗಲಾಟೆ ಆಗುವ ಸಾಧ್ಯತೆಗಳಿವೆ. ಹೀಗಾಗಿ ಸುಮಾರು 80 ಆರೋಪಿಗಳನ್ನು ಕೆಎಸ್ ಆರ್ ಟಿಸಿ ಬಸ್ ಮೂಲಕ ಸಿಸಿಬಿ ಹಾಗೂ ಕೆಎಸ್ ಆರ್ ಪಿ ಭದ್ರತೆಯಲ್ಲಿ ಬಳ್ಳಾರಿ ಸೆಂಟ್ರಲ್ ಜೈಲಿಗೆ ಸ್ಥಳಾಂತರ ಮಾಡಲಾಗಿದೆ.

- Advertisement -

Related news

error: Content is protected !!