Thursday, December 5, 2024
spot_imgspot_img
spot_imgspot_img

4 ಕನ್ನಡ ಶಾಲೆಗಳನ್ನು ದತ್ತು ಪಡೆದ ನಟ ಕಿಚ್ಚ ಸುದೀಪ್ – ಕಿಚ್ಚನ ಕಾರ್ಯಕ್ಕೆ ಸಚಿವ ಡಾ.ಸುಧಾಕರ್ ಶ್ಲಾಘನೆ

- Advertisement -
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ 4 ಕನ್ನಡ ಶಾಲೆಗಳನ್ನು ದತ್ತು ಪಡೆದಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಈ ಕಾಲದಲ್ಲಿ ಕನ್ನಡ ಶಾಲೆಗಳ ಉಳಿವಿಗೆ ಶ್ರಮಿಸುತ್ತಿರುವ ಕಿಚ್ಚನ ಮಹತ್ಕಾರ್ಯಕ್ಕೆ ಅಭಿಮಾನಿಗಳಿಂದ ಅಭಿನಂದನೆಯ ಮಹಾಪೂರವೇ ಹರಿದುಬರ್ತಿದೆ.

ಕನ್ನಡ ಉಳಿಯಬೇಕಾದರೆ ಕನ್ನಡ ಶಾಲೆಗಳು ಉಳಿಯಬೇಕು ಎಂಬ ಒಕ್ಕೊರಲಿನ ಧ್ವನಿಗೆ ಕಿಚ್ಚ ಕೂಡ ದನಿ ಗೂಡಿಸಿದ್ದಾರೆ. ತಮ್ಮ ತವರು ಜಿಲ್ಲೆ ಶಿವಮೊಗ್ಗದ 4 ಕ್ನನಡ ಶಾಲೆಗಳನ್ನು ದತ್ತು ಪಡೆದಿದ್ದು, ಕನ್ನಡ ಕಟ್ಟುವ ಕೆಲಸಕ್ಕೆ ಕೈ ಹಾಕಿದ್ದಾರೆ. ಇನ್ನು ಮುಂದೆ ಸಾಗರ ತಾಲೂಕಿನ 4 ಶಾಲೆಗಳ ಉಸ್ತುವಾರಿಯನ್ನು ಸುದೀಪ್ ಸ್ಥಾಪಿತ ಸಾಮಾಜಿಕ ಟ್ರಸ್ಟ್ ನೋಡಿಕೊಳ್ಳಲಿದೆ.

ಇನ್ನು ಈ ಹಿಂದೆಯೂ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಹಾಗೂ ಹಿರಿಯೂರು ತಾಲೂಕಿನ ಕೆಲ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಿದ್ದರು.

ಕಿಚ್ಚನ ಮಹಾತ್ಕಾರ್ಯಕ್ಕೆ ಸಚಿವ ಸುಧಾಕರ್ ಮೆಚ್ಚುಗೆ:

ಇನ್ನು ಕಿಚ್ಚನ ಈ ಮಹಾತ್ಕಾರ್ಯಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಟ್ವಿಟ್ಟರ್ ನಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್ ಅವರು ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಸ್ಕೂಲ್ ಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯ. ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು ಎಂದು ಟ್ವೀಟ್ ಮಾಡಿದ್ದಾರೆ.

- Advertisement -

Related news

error: Content is protected !!