- Advertisement -
- Advertisement -
ವಿಟ್ಲ: ಪ್ರೀತಿಸುತ್ತಿದ್ದ ವ್ಯಕ್ತಿ ಗೆಳೆಯನ ಮನೆಯಲ್ಲಿ ಕೂಡಿಹಾಕಿ ಲೈಂಗಿಕ ದೌರ್ಜನ್ಯ ನಡೆಸಿದ್ದು ಅಲ್ಲದೆ ಮಾಹಿತಿಯನ್ನು ಬೇರೆಯವರಿಗೆ ತಿಳಿಸಿದರೆ ಜೀವ ಸಹಿತ ಉಳಿಸುವುದಿಲ್ಲ ಎಂದು ಬೆದರಿಕೆ ಹಾಕಿದ ಬಗ್ಗೆ ವಿಟ್ಲ ಠಾಣೆಯಲ್ಲಿ ಯುವತಿ ನೀಡಿದ ದೂರಿನ ಪ್ರಕಾರ ಪ್ರಕರಣ ದಾಖಲಾಗಿದೆ.
ವಿಶ್ವನಾಥ ಪೂಜಾರಿ ಹಾಗೂ ನಿತಿನ್ ಎಂಬವರು ಕೃತ್ಯದಲ್ಲಿ ಭಾಗಿಯಾದ ಬಗ್ಗೆ ದೂರಿನಲ್ಲಿ ಹೇಳಿದ್ದಾಳೆ. ಸಾಲೆತ್ತೂರು ಗ್ರಾಮದ 20 ವರ್ಷದ ಯುವತಿಯನ್ನು ವಿಶ್ವನಾಥ ಪೂಜಾರಿ ಪ್ರೀತಿಸಿದ್ದು, ಯುವತಿಗೆ ಆತ್ಮಹತ್ಯೆ ಮಾಡುವುದಾಗಿ ಬೆದರಿಸಿ, ಮನೆಗೆ ಅಕ್ರಮವಾಗಿ ಪ್ರವೇಶಿಸಿ ಕಿಡ್ನಾಪ್ ಮಾಡುವುದಾಗಿ ಬೆದರಿಸಿ ಯುವತಿಯನ್ನು ದ್ವಿಚಕ್ರವಾಹನದಲ್ಲಿ ಕರೆದೊಯ್ದು ನಿತಿನ್ ಮನೆಯಲ್ಲಿ ಕೂಡಿ ಹಾಕಿ ಲೈಂಗಿಕವಾಗಿ ಬಳಸಿಕೊಂಡು ಮಾನಸಿಕವಗಿ ಹಿಂಸೆ ನೀಡಿದ ಬಗ್ಗೆ ಯುವತಿ ನೀಡಿದ ದೂರಿನಲ್ಲಿ ತಿಳಿಸಿದ್ದಾಳೆ. ಜಾತಿ ನಿಂದನೆ ಸಹಿತ ಹಲವು ಸೆಕ್ಷನ್ ನಲ್ಲಿ ಪ್ರಕರಣ ದಾಖಲಾಗಿದೆ.
- Advertisement -