Friday, March 29, 2024
spot_imgspot_img
spot_imgspot_img

ಅರ್ಚಕರ ಹಂತಕರು ಖಾಕಿ ಬಲೆಗೆ

- Advertisement -G L Acharya panikkar
- Advertisement -

ಮಂಡ್ಯ ಜಿಲ್ಲೆಯ ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಮೂವರು ಅರ್ಚಕರನ್ನು ಹತ್ಯೆಗೈದಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ ಬಂಧಿಸುವಾಗ ಪೊಲೀಸರ ಮೇಲೆ ಆರೋಪಿಗಳು ದಾಳಿ ನಡೆಸಿದ್ದರು ಎನ್ನಲಾಗಿದ್ದು, ಪ್ರತಿಯಾಗಿ ಪೊಲೀಸರು ಮೂವರು ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಆರೋಪಿಗಳ ಪತ್ತೆಗೆ ಗ್ರಾಮಾಂತರ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಎನ್.ವಿ.ಮಹೇಶ್ ಹಾಗೂ ಪೂರ್ವ ಪೋಲೀಸ್ ಠಾಣೆಯ ಪಿ.ಎಸ್.ಐ ಶರತ್ ಕುಮಾರ್ ನೇತೃತ್ವದಲ್ಲಿ ತಂಡವನ್ನು ರಚನೆ ಮಾಡಲಾಗಿತ್ತು. ಆರೋಪಿಗಳು ಮದ್ದೂರು ತಾಲೂಕಿನ ಸಾದೊಳಲು ಗೇಟ್ ಬಳಿ ಸಿಕ್ಕಿಬಿದ್ದಿದ್ದಾರೆ.

ಆರೋಪಿಗಳನ್ನು ಬಂಧಿಸಲು ಮುಂದಾದ ವೇಳೆ ಆರೋಪಿಗಳಾದ ಆಂಧ್ರ ಪ್ರದೇಶದ ವಿಜಿ, ತೊಪ್ಪನಹಳ್ಳಿ ಗ್ರಾಮದ ಮಂಜ, ಅರೆಕಲ್ ದೊಡ್ಡಿ ಗ್ರಾಮದ ಗಾಂಧಿ ಎಂಬುವವರು ಪೊಲೀಸ್ ಸಿಬ್ಬಂದಿಗಳ ಮೇಲೆ ಕಲ್ಲು ಮತ್ತು ಚೂರಿಯಿಂದ ಹಲ್ಲೆ ನಡೆಸಲು ಮುಂದಾಗಿದ್ದಾರೆ ಎನ್ನಲಾಗಿದೆ

ಆಗ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಎಚ್ಚರಿಕೆ ನೀಡಿದ ಹೊರತಾಗಿಯು ಆರೋಪಿಗಳು ಹಲ್ಲೆಗೆ ಮುಂದಾದಾಗ ಪೊಲೀಸರು 3 ಮಂದಿ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿ, ಓಡಲು ಯತ್ನಿಸಿದವರನ್ನು ಬಂಧಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಪೂರ್ವ ಪೊಲೀಸ್ ಠಾಣೆಯ ಪಿಎಸ್ಐ ಶರತ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಅನಿಲ್ ಕುಮಾರ್, ಕೃಷ್ಣ ಕುಮಾರ್‌ ತೀವ್ರವಾಗಿ ಗಾಯಗೊಂಡಿದ್ದು, ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದ ಬಳಿಕ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.

ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡ 3 ಮಂದಿ ಆರೋಪಿಗಳನ್ನು ಮದ್ದೂರು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿ ಕೆ ಪರಶುರಾಮ್ ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಳಿಕ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಸಿಬ್ಬಂದಿಗಳ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿ ಕಾರ್ಯಚರಣೆ ಕೈಗೊಂಡ ಪೊಲೀಸ್ ಸಿಬ್ಬಂದಿಯನ್ನು ಪ್ರಶಂಸಿಸಿದ್ದಾರೆ ಎಂದು ವರದಿಯಾಗಿದೆ.

ಪೊಲೀಸರು ಈ ಹಿಂದೆ ಇಬ್ಬರನ್ನು ಬಂಧಿಸಿ, ಅವರಿಂದ 1.25 ಲಕ್ಷ ಹಣ ವಶಪಡಿಸಲಾಗಿತ್ತು. ಕೊಲೆಯಲ್ಲಿ 9-10 ಜನರು ಭಾಗಿಯಾಗಿದ್ದಾರೆ ಎನ್ನಲಾಗಿದ್ದು, ಉಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ.

ಶ್ರೀ ಅರ್ಕೇಶ್ವರ ದೇವಾಲಯದಲ್ಲಿ ಕಾವಲುಗಾರರು ಹಾಗೂ ಅರ್ಚಕರಾಗಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಗಣೇಶ್ (35), ಪ್ರಕಾಶ್ (36) ಮತ್ತು ಆನಂದ್ (33) ಎಂಬವರನ್ನು ಶುಕ್ರವಾರ ಬೆಳಗ್ಗಿನ ಜಾವ ದೇವಾಲಯದ ಪ್ರಾಂಗಣದಲ್ಲೇ ಹತ್ಯೆಗೈದು ಹುಂಡಿಯ ಹಣವನ್ನು ಕಳ್ಳತನ ಮಾಡಲಾಗಿತ್ತು.

ಮುಖ್ಯಮಂತ್ರಿ ಯಡಿಯೂರಪ್ಪ ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ

- Advertisement -

Related news

error: Content is protected !!