- Advertisement -
- Advertisement -



ಕಿನ್ನಿಗೋಳಿ: ಕಿನ್ನಿಗೋಳಿಯ ಲಾಡ್ಜ್ ಒಂದರ ಮ್ಯಾನೇಜರ್‌ಗೆ ಹಫ್ತಾಕ್ಕಾಗಿ ಬೆದರಿಕೆಯೊಡ್ಡಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತರನ್ನು ಸುರತ್ಕಲ್ ಕುಳಾಯಿ ನಿವಾಸಿ ಧನುಷ್ ಭಂಡಾರಿ (30) ಮತ್ತು ನರಿಂಗಾನ ನಿವಾಸಿ ಆದಿತ್ಯ (18) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಮುಲ್ಕಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಪಿ ಧನುಷ್ ವಿರುದ್ಧ ಈ ಹಿಂದೆ ಮಂಗಳೂರು ಉತ್ತರ, ಮಂಗಳೂರು ದಕ್ಷಿಣ, ಉರ್ವ, ಕಂಕನಾಡಿ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ, ದರೋಡೆ ಸುಲಿಗೆ ಪ್ರಕರಣ ದಾಖಲಾಗಿದೆ.
- Advertisement -