Sunday, May 5, 2024
spot_imgspot_img
spot_imgspot_img

ಬಿಜೆಪಿ ರಾಜ್ಯ ಉಪಾಧ್ಯಕ್ಷರದ್ದು ಎನ್ನಲಾದ ಅಶ್ಲೀಲ ವೀಡಿಯೋ ವೈರಲ್ – ಈ ವಿಡಿಯೊ ನನ್ನದಲ್ಲ..!

- Advertisement -G L Acharya panikkar
- Advertisement -

ಬಿಜೆಪಿ ನಾಯಕರೊಬ್ಬರ ಅಶ್ಲೀಲ ವಿಡಿಯೊ ಈಗ ಸಾಕಷ್ಟು ವೈರಲ್ ಆಗುತ್ತಿದೆ. ಮಹಾರಾಷ್ಟ್ರ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಲೋಕಸಭಾ ಸದಸ್ಯ ಕಿರಿಟ್‌ ಸೋಮಯ್ಯ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಸ್ಥಳೀಯ ಮಾರಾಠಿ ನ್ಯೂಸ್ ಚಾನಲ್‌ಗಳಲ್ಲಿ ಪ್ರಸಾರವಾಗಿದ್ದಾಗಿ ಸುದ್ದಿ ಮಾಧ್ಯಮಗಳು ವರದಿ ಮಾಡಿದೆ.

ಈ ವಿಷಯ ಮಹಾರಾಷ್ಟ್ರದಲ್ಲಿ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಕಿರಿಟ್ ಸೋಮಯ್ಯ ಅವರ ಬಗ್ಗೆ ಟೀಕೆಗಳು ಕೇಳಿ ಬಂದಿವೆ. ದೂರುಗಳು ಕೂಡ ದಾಖಲಾಗಿವೆ.

ಆದರೆ, ಕಿರಿಟ್ ಸೋಮಯ್ಯ ಅವರು, ಈ ವಿಡಿಯೊ ನನ್ನದಲ್ಲ. ನನ್ನ ಹೆಸರಿನಲ್ಲಿ ತಿರುಚಿದ ವಿಡಿಯೊಗಳನ್ನು ಬಿತ್ತರಿಸಲಾಗಿದೆ. ನಾನು ಯಾವುದೇ ಮಹಿಳೆ ಅಥವಾ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿಲ್ಲ.

ವಿಡಿಯೊ ಸತ್ಯಾಸತ್ಯತೆ ಬಗ್ಗೆ ತನಿಖೆ ಮಾಡಿ ಕ್ರಮ ಜರುಗಿಸಬೇಕು ಎಂದು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯೂ ಆಗಿರುವ ಗೃಹ ಸಚಿವ ದೇವೇಂದ್ರ ಫಡಣವೀಸ್ ಅವರಿಗೆ ಟ್ವಿಟ್ ಮೂಲಕ ದೂರು ನೀಡಿದ್ದಾರೆ.

ವಿಡಿಯೊದಲ್ಲಿ ಕಿರಿಟ್ ಸೋಮಯ್ಯ ಎನ್ನಲಾದ ವ್ಯಕ್ತಿಯಾರೋ ಮಹಿಳೆಯೊಬ್ಬರ ಜೊತೆ ಅಶ್ಲೀಲವಾಗಿ ಮಾತನಾಡುತ್ತಾ ಅಶ್ಲೀಲ ಹಾವಭಾವ ಪ್ರದರ್ಶಿಸುತ್ತಾ, ಬೆತ್ತಲೆ ದೇಹ ಪ್ರದರ್ಶನ ಮಾಡಿರುವುದು ತೋರುತ್ತದೆ. ಒಂದು ಬಾರಿ ಶಾಸಕ ಹಾಗೂ ಎರಡು ಸಾರಿ ಬಿಜೆಪಿಯಿಂದ ಲೋಕಸಭೆ ಸದಸ್ಯರಾಗಿದ್ದ ಕಿರಿಟ್ ಸೋಮಯ್ಯ ಅವರು ಮುಂಬೈ ಉತ್ತರ ಭಾಗದ ರಾಜಕಾರಣಿಯಾಗಿದ್ದಾರೆ.

- Advertisement -

Related news

error: Content is protected !!